ಮೋಟಾರ್‌ ರಿವೈಂಡಿಂಗ್ ಮತ್ತು ಪಂಪ್‌ಸೆಟ್‌ ರಿಪೇರಿ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೋಟಾರ್‌ ರಿವೈಂಡಿಂಗ್ & ಪಂಪ್‌ಸೆಟ್‌ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಆಗಸ್ಟ್‌ 15 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9740982585, 8884554510, 9241482541, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

5 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

16 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

23 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago