ಮೋದಿಯವರು ಜಾರಿಗೆ ತಂದಿರುವ ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ-‌ಸಿಎಂ ಸಿದ್ದರಾಮಯ್ಯ

ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ BRCಯನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ. ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರ? ಎಂದು ಸವಾಲೆಸೆದರು.

BJP ಮತ್ತು BRC ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದರು.

ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು, ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

BJP ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

3 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

3 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

4 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

7 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

19 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

19 hours ago