ಕೋಲಾರ: ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನಗರದ ಡೂಂಲೈಟ್ ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂ ಶಕ್ತಿ ಚಲಪತಿ ಮಾತನಾಡ ಕಳೆದ ಹತ್ತು ವರ್ಷದಿಂದ ದೇಶದಲ್ಲಿ ಮೋದಿಯ ಆಡಳಿತದಿಂದ ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಆಡಳಿತವನ್ನು ದೇಶದ ಜನರು ಮೆಚ್ಚಿ ಮತ್ತೊಮ್ಮೆ ಬಿಜೆಪಿಗೆ ಅವಕಾಶವನ್ನು ದೇಶದ ಜನರು ನೀಡಿದ್ದಾರೆ ಕಾಂಗ್ರೆಸ್ ಪಕ್ಷದ ದುರಾಡಳಿತ ಕೊನೆಗಾಣಿಸಬೇಕಾಗಿದೆ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಎದುರಿಸಲಿದೆ ಎಂದರು
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ, ದೇಶ ಮುನ್ನಡೆಯಲು ಮೋದಿಯವರು ಪ್ರಧಾನಿಯಾಗಬೇಕು ಎನ್ನುವ ಆಕಾಂಕ್ಷೆಯನ್ನು ದೇಶದ ಜನರು ಇಟ್ಟುಕೊಂಡಿದ್ದರು ಅದರ ಭಾಗಿವಾಗಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಮುಂಬರುವ ಸ್ಥಳಿಯ ಸಂಸ್ಥೆಗಳಗೆ ನಡೆಯುವ ಚುನಾವಣೆಯಗಳಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಭರವಸೆ ನೀಡಿದರಲ್ಲದೆ ಕೇಂದ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿಯವರ ಸಂಪುಟದಲ್ಲಿ ಸಚಿವ ಸ್ಥಾನ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರದೆಯೊಂದರ ಮೇಲೆ ಪ್ರಮಾಣವಚನದ ನೇರ ಪ್ರಸಾರ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು ವಿಜಯೋತ್ಸವದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಎರಡು ಪಕ್ಷದ ಮುಖಂಡರಾದ ಅರುಣಮ್ಮ, ರಾಕೇಶ್, ಸಾ.ಮಾ ಬಾಬು, ನಾಮಲ್ ಮಂಜು, ಬಾಲಾಜಿ, ಅಪ್ಪಿ, ಚಂಬೆ ರಾಜೇಶ್, ದಿಂಬ ನಾಗರಾಜಗೌಡ, ಶಿವಕುಮಾರ್, ಮುಂತಾದವರು ಇದ್ದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…