Categories: ಕೋಲಾರ

ಮೋದಿ ಮೂರನೇ ಬಾರಿ ಪ್ರಧಾನಿ: ನಗರದಲ್ಲಿ ಬಿಜೆಪಿ ಜೆಡಿಎಸ್‌ ಕಾರ್ಯಕರ್ತರಿಂದ ವಿಜಯೋತ್ಸವ

ಕೋಲಾರ: ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನಗರದ ಡೂಂಲೈಟ್ ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂ ಶಕ್ತಿ ಚಲಪತಿ ಮಾತನಾಡ ಕಳೆದ ಹತ್ತು ವರ್ಷದಿಂದ ದೇಶದಲ್ಲಿ ಮೋದಿಯ ಆಡಳಿತದಿಂದ ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಆಡಳಿತವನ್ನು ದೇಶದ ಜನರು ಮೆಚ್ಚಿ ಮತ್ತೊಮ್ಮೆ ಬಿಜೆಪಿಗೆ ಅವಕಾಶವನ್ನು ದೇಶದ ಜನರು ನೀಡಿದ್ದಾರೆ ಕಾಂಗ್ರೆಸ್ ಪಕ್ಷದ ದುರಾಡಳಿತ ಕೊನೆಗಾಣಿಸಬೇಕಾಗಿದೆ ಜೆಡಿಎಸ್‌ ಮತ್ತು ಬಿಜೆಪಿ ನೇತೃತ್ವದಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಎದುರಿಸಲಿದೆ ಎಂದರು

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ, ದೇಶ ಮುನ್ನಡೆಯಲು ಮೋದಿಯವರು ಪ್ರಧಾನಿಯಾಗಬೇಕು ಎನ್ನುವ ಆಕಾಂಕ್ಷೆಯನ್ನು ದೇಶದ ಜನರು ಇಟ್ಟುಕೊಂಡಿದ್ದರು ಅದರ ಭಾಗಿವಾಗಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಮುಂಬರುವ ಸ್ಥಳಿಯ ಸಂಸ್ಥೆಗಳಗೆ ನಡೆಯುವ ಚುನಾವಣೆಯಗಳಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಭರವಸೆ ನೀಡಿದರಲ್ಲದೆ ಕೇಂದ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿಯವರ ಸಂಪುಟದಲ್ಲಿ ಸಚಿವ ಸ್ಥಾನ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರದೆಯೊಂದರ ಮೇಲೆ ಪ್ರಮಾಣವಚನದ ನೇರ ಪ್ರಸಾರ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು ವಿಜಯೋತ್ಸವದಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಎರಡು ಪಕ್ಷದ ಮುಖಂಡರಾದ ಅರುಣಮ್ಮ, ರಾಕೇಶ್, ಸಾ.ಮಾ ಬಾಬು, ನಾಮಲ್ ಮಂಜು, ಬಾಲಾಜಿ, ಅಪ್ಪಿ, ಚಂಬೆ ರಾಜೇಶ್, ದಿಂಬ ನಾಗರಾಜಗೌಡ, ಶಿವಕುಮಾರ್, ಮುಂತಾದವರು ಇದ್ದರು

Ramesh Babu

Journalist

Recent Posts

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

5 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

5 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

6 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

18 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

2 days ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

2 days ago