ದೊಡ್ಡಬಳ್ಳಾಪುರ: ತಾಲ್ಲೂಕಿನ ಮೋಪರಹಳ್ಳಿ ಗ್ರಾಮದ ದಾಸಪ್ಪ (93) ಶನಿವಾರ ನಿಧನ ಹೊಂದಿದ್ದಾರೆ. ದಾಸಪ್ಪ ಅವರು ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ 15 ವರ್ಷಗಳು ಸೇವೆ ಸಲ್ಲಿಸಿದ್ದಾರೆ.
ದಾಸಪ್ಪ ಅವರು ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯ ಚಟುವಟಿಕೆಗಳಲ್ಲಿ, ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು, ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಾಹಕ ಡಾ. ಎಂ ಚಿಕ್ಕಣ್ಣ ಅಧ್ಯಕ್ಷರಾದ ಮುನಿಕೃಷ್ಣ, ಉಪಾಧ್ಯಕ್ಷರಾದ ರಾಮಪ್ಪ ಹಾಗೂ ನಿರ್ದೇಶಕರುಗಳು ಸಂತಾಪ ಸೂಚಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಸ್ವಗ್ರಾಮ ಮೋಪರಹಳ್ಳಿಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.