ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.
ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಗ್ರಾಮದ ಮುಖಂಡರುಗಳು ಹಾಜರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…