ರಾಜ್ಯದ ಹಲವಾರು ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ನಟೋರಿಯಸ್ ಅಪರಾಧಿ ಹೊಟ್ಟೆ ಮಂಜನನ್ನು ಬೆಂಗಳೂರಿನ ಸದಾಶಿವನಗರ ಸಿಗ್ನಲ್‌ನಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೊಡ್ಡಲಿಂಗಯ್ಯನವರು ತನ್ನ ಪ್ರಾಣದ ಹಂಗನ್ನು ಲೆಕ್ಕಿಸದೆ ಬೆನ್ನಟ್ಟಿ ಹಿಡಿದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸುಮಾರು 40 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ ಅಲಿಯಾಸ್ ಹೊಟ್ಟೆ ಮಂಜು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಈ ಹೊಟ್ಟೆ ಮಂಜುನನ್ನು ಸಿನಿಮೀಯ ರೀತಿಯಲ್ಲಿ ಬೈಕ್ ಅಡ್ಡಗಟ್ಟಿದ ಪೊಲೀಸರು ಲಾಕ್ ಮಾಡಿದ್ದಾರೆ. ಆರೋಪಿ ಮಂಜು ಚಿನ್ನಾಭರಣ ಧರಿಸಿರುವ ವೃದ್ಧೆಯರನ್ನೆ ಟಾರ್ಗೆಟ್ ಮಾಡುತ್ತಿದ್ದ. ಪಿಂಚಣಿ, ವೃದ್ದಾಪ್ಯಾವೇತನ, ಪೋಸ್ಟ್ಆಫೀಸ್ಗಳಲ್ಲಿ ಹಣ ಬರೋ ಹಾಗೆ ಮಾಡುತ್ತೇನೆ ಎಂದು ನಂಬಿಸಿ ವಂಚನೆ ಮಾಡುತ್ತಿದ್ದ.
ಈ ಸಂಬಂಧ ಕೊರಟಗೆರೆ, ಮಧುಗಿರಿ, ಹೆಬ್ಬೂರು, ಕೋಳಾಲ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೊಬ್ಬರಿ 40 ಕೇಸ್ಗಳು ಈತನ ಮೇಲಿವೆ ಎನ್ನಲಾಗಿದೆ.
ಕೊರಟಗೆರೆ ಠಾಣೆ ಕ್ರೈಂ ಸಿಬ್ಬಂದಿ ದೊಡ್ಡಲಿಂಗಯ್ಯ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಸಿಗ್ನಲ್ ಬಳಿ ಪ್ರಾಣ ಪಣಕ್ಕಿಟ್ಟು ಖದೀಮನನ್ನು ರೋಚಕವಾಗಿ ಲಾಕ್ ಮಾಡಿದ್ದಾರೆ.
ಆರೋಪಿ ಪತ್ತೆ ಹೇಗೆ:-
ಜೂ.20ರಂದು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಟಗೆರೆ ಟೌನ್ ಡಿಸಿಸಿ ಬ್ಯಾಂಕ್ ಬಳಿ ಘಟನೆ ನಡೆದ ನಂತರ ಆರೋಪಿಯನ್ನು ಹಿಂಬಾಲಿಸಿ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿ ಆರೋಪಿಯು ದಾಬಸ್ ಪೇಟೆ, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಿದ್ದು, ಆರೋಪಿ ಪತ್ತೆಗಾಗಿ ಆರೋಪಿತನ ವಾಹನ ಸಂಖ್ಯೆಯನ್ನು ಅಲರ್ಟ್ ವಾರ್ನಿಂಗ್ ಸೆಂಟರ್ ಗೆ ನಮೂದಿಸಿದ್ದು, ಆರೋಪಿಯ ವಾಹನ ಸಂಖ್ಯೆ ಅಲರ್ಟ್ ಎಚ್ಚರಿಕೆ ಕೇಂದ್ರದ ಇಂಜಿನಿಯರ್ ಸಹಕಾರದೊಂದಿಗೆ ಅಲರ್ಟ್ ಎಚ್ಚರಿಕೆ ಕೇಂದ್ರಕ್ಕೆ ಪ್ರವೇಶಿಸಿದೆ. ಸುಮಾರು 01 ತಿಂಗಳಿನಿಂದ ಸದಾಶಿವನಗರ ಹಾಗೂ ಎಂ.ಎಸ್.ರಾಮಯ್ಯ ಆಸ್ಪತ್ರೆ ಬಳಿ ಕಾದು ಕುಳಿತಿದ್ದ ಕೊರಟಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ದೊಡ್ಡಲಿಂಗಯ್ಯನವರಿಗೆ ಆ.6ರಂದು ಬೆಂಗಳೂರು ಕಮಾಂಡ್ ಸೆಂಟರ್ ರವರು ಮಾಹಿತಿ ಬಂದ ಕೂಡಲೇ ಸದಾಶಿವನಗರ ಟ್ರಾಫಿಕ್ ಜಂಕ್ಷನ್ ಬಳಿ ಬಂದು ಆರೋಪಿಯನ್ನು ಹಿಡಿಯಲು ಪ್ರಯತ್ನ ಮಾಡುತ್ತಾರೆ. ದ್ವಿಚಕ್ರ ವಾಹನದಲ್ಲಿ ಬಂದ ಆಸಾಮಿ ವಾಹನ ನಿಲ್ಲಿಸಲಿಲ್ಲ. ಆದರೂ ಆತನನ್ನು ಬಿಡದೇ ಪಟ್ಟಾಗಿ ಹಿಡಿದಕೊಂಡಿದ್ದರು.
ನಂತರ ಸದಾಶಿವನಗರ ಸಂಚಾರ ಠಾಣೆ ಮಹಿಳಾ ಎಎಸ್‌ಐ ನಾಗಮ್ಮ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಶ್ರೀಧರ್ ಅವರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಯಿತು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…