ಮೌಲ್ಯವರ್ಧಿತ ತೆರಿಗೆಯಲ್ಲಿ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಕೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ  ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

9 minutes ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

2 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

7 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

11 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago