ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ ‘ಜೀ’’ ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎಂದಿದ್ದಾರೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…