ಮ್ಯಾಂಡೊಸ್ ಚಂಡಮಾರುತ ಹಿನ್ನೆಲೆ ಹವಾಮಾನದಲ್ಲಿ ಏರುಪೇರು

ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಹವಾಮಾನ ಬುಲೆಟಿನ್‌ನಲ್ಲಿ ಮ್ಯಾಂಡೊಸ್ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಾರೈಕಲ್‌ನ ಸುಮಾರು 270 ಕಿಮೀ ESE ಯ ಮೇಲೆ ಇದೆ ಎಂದು ಹೇಳಿದೆ. ಇದು ಪಶ್ಚಿಮ ವಾಯುವ್ಯಕ್ಕೆ ಚಲಿಸಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಡಿಸೆಂಬರ್ 9 ರ ಮಧ್ಯರಾತ್ರಿ ಸುಮಾರು 65-75 ಕಿಮೀ ವೇಗದಲ್ಲಿ ಗಾಳಿ ಬೀಸಿದೆ. ಹವಾಮಾನ ಇಲಾಖೆ ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಕಾರೈಕಲ್ ಮತ್ತು ಆಂಧ್ರಪ್ರದೇಶ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಅಲರ್ಟ್ ಮಾಡಲಾಗಿದೆ. ಮ್ಯಾಂಡೊಸ್ ಚಂಡಮಾರುತದ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಎನ್‌ಡಿಆರ್‌ಎಫ್ ತಂಡಗಳು, ಸೇನೆ, ನೌಕಾಪಡೆಯನ್ನು ಸಹ ಚಂಡಮಾರುತದ ಅಬ್ಬರ ನಿಯಂತ್ರಣಕ್ಕೆ ಸಜ್ಜುಗೊಳಿಸಲಾಗಿದೆ.

ಡಿಸೆಂಬರ್ 6 ರಂದು ರಾತ್ರಿ 11:30 ಗಂಟೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ, ಕಾರೈಕಲ್‌ನಿಂದ ಸುಮಾರು 840 ಕಿಮೀ ಪೂರ್ವ-ಆಗ್ನೇಯಕ್ಕೆ ಮತ್ತು ಚೆನ್ನೈನಿಂದ ಸುಮಾರು 900 ಕಿಮೀ ಆಗ್ನೇಯದಲ್ಲಿ ಡಿಪ್ರೆಷನ್ ಶುರುವಾಗಿದೆ ಎಂದು ಐಎಂಡಿ ತಿಳಿಸಿದೆ.

ಇದು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳು ಮತ್ತು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚಿನ ಭಾಗಗಳಲ್ಲಿ ಮಳೆಯನ್ನು ತರುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗುಡುಗು ಮತ್ತು ಮಿಂಚು ಸಹ ಇರಲಿದೆ ಎಂದು ಹೇಳಲಾಗಿದೆ.

ಅಂಡಮಾನ್ ಸಮುದ್ರ ಮತ್ತು ಬಂಗಾಳಕೊಲ್ಲಿಯ ಕೆಲವು ಭಾಗಗಳು ಹಾಗೂ ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಸಮುದ್ರದ ಪರಿಸ್ಥಿತಿಯು ತುಂಬಾ ಪ್ರಕ್ಷುಬ್ಧವಾಗಿರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಹಿನ್ನೆಲೆ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಏರ್ಪಟ್ಟಿದೆ.

Leave a Reply

Your email address will not be published. Required fields are marked *