ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ ಪಡೆದ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ

ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು  ಎರಡು ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಬೆಂ. ಗ್ರಾ. ಜಿಲ್ಲೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬೆಂ. ಗ್ರಾ. ಜಿಲ್ಲೆ, ಪ್ರಗತಿ ಪ್ರಥಮ ದರ್ಜೆ ಕಾಲೇಜು ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ  “ಯುವ ಜನೋತ್ಸವ” ಪ್ರಯುಕ್ತ ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ನಡೆಯಿತು, ಈ ಮ್ಯಾರಥಾನ್ ಸ್ಪರ್ಧೆಯಲ್ಲಿ  ದೊಡ್ಡಬಳ್ಳಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ ಮಹಿಳಾ ವಿದ್ಯಾರ್ಥಿಗಳಲ್ಲಿ ಪ್ರಥಮ ಬಹುಮಾನ, ಪುರುಷ ವಿದ್ಯಾರ್ಥಿಗಳಲ್ಲಿ ದರ್ಶನ್ ಕೆ.ವಿ ಪ್ರಥಮ ಬಹುಮಾನ, ಸುನಿಲ್ ಸಿ ಸಮಾಧಾನಕರ ಬಹುಮಾನವನ್ನು ಪಡೆದಿದ್ದಾರೆ.

ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಮೂರು ಬಹುಮಾನವನ್ನು   ಪಡೆದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಜೆ. ಆರ್ ರಾಕೇಶ್ 3000 ಸಾವಿರ ಚೆಕ್ ವಿತರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್ ನಾಗರಾಜ್,  ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಂತೇಶಪ್ಪ, ಲಯನ್ಸ್ ಕ್ಲಬ್ ನ ಖಜಾಂಚಿಗಳಾದ ರವಿಕುಮಾರ್, ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಮೂರ್ತಿ, ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಲಕ್ಷ್ಮೀಶ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *