ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.
ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಬೆಂ. ಗ್ರಾ. ಜಿಲ್ಲೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬೆಂ. ಗ್ರಾ. ಜಿಲ್ಲೆ, ಪ್ರಗತಿ ಪ್ರಥಮ ದರ್ಜೆ ಕಾಲೇಜು ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ “ಯುವ ಜನೋತ್ಸವ” ಪ್ರಯುಕ್ತ ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ನಡೆಯಿತು, ಈ ಮ್ಯಾರಥಾನ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ ಮಹಿಳಾ ವಿದ್ಯಾರ್ಥಿಗಳಲ್ಲಿ ಪ್ರಥಮ ಬಹುಮಾನ, ಪುರುಷ ವಿದ್ಯಾರ್ಥಿಗಳಲ್ಲಿ ದರ್ಶನ್ ಕೆ.ವಿ ಪ್ರಥಮ ಬಹುಮಾನ, ಸುನಿಲ್ ಸಿ ಸಮಾಧಾನಕರ ಬಹುಮಾನವನ್ನು ಪಡೆದಿದ್ದಾರೆ.
ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಮೂರು ಬಹುಮಾನವನ್ನು ಪಡೆದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಜೆ. ಆರ್ ರಾಕೇಶ್ 3000 ಸಾವಿರ ಚೆಕ್ ವಿತರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್ ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಂತೇಶಪ್ಪ, ಲಯನ್ಸ್ ಕ್ಲಬ್ ನ ಖಜಾಂಚಿಗಳಾದ ರವಿಕುಮಾರ್, ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಮೂರ್ತಿ, ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಲಕ್ಷ್ಮೀಶ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…