ಯಂತ್ರ/ಉಪಕರಣಗಳನ್ನು ಖರೀದಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ

1). ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ಮಾವು, ಬಾಳೆ, ಸೀಬೆ, ಹೈಬ್ರಿಡ್ ತರಕಾರಿ )
2). ರೋಗ ಮತ್ತು ಕೀಟ ನಿಯಂತ್ರಣ
3). ಪ್ಲಾಸ್ಟಿಕ್ ಹೊದಿಕೆ
4). ಹಸಿರುಮನೆ ನಿರ್ಮಾಣ
5). ಶೇಡ್ ನೆಟ್ ಹೌಸ್
6). ವೈಯಕ್ತಿಕ ಕೃಷಿಹೊಂಡ,
7).ಪ್ಯಾಕ್ ಹೌಸ್ ಹಾಗೂ
8). ಯಂತ್ರ/ಉಪಕರಣಗಳನ್ನು ಖರೀದಿಸಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.

2023-24 ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು 2023 ರ ಆಗಸ್ಟ್ 31 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ತಾಲ್ಲೂಕಿನ ರೈತರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.

ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು
ದೂರವಾಣಿ ಸಂಖ್ಯೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ),ನೆಲಮಂಗಲ.
9880461607

ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾ.ಸ), ನೆಲಮಂಗಲ.
9902581832

ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ
7337866626

ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ
8884829971

ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ
8197655732 ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 minutes ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

2 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

2 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

3 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

5 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

9 hours ago