ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಾವನಿಗೆ ಸೊಸೆಯಿಂದಲೇ ಲಿವರ್‌ನ ಒಂದು ಭಾಗ ದಾನ: ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್‌ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್‌ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ಯಕೃತ್‌ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್‌ ಜಿ.ಎಸ್‌.ಬಿ. ಹಾಗೂ ಡಾ. ಪಿಯೂಷ್‌ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ಕಿಶೋರ್‌ ಜಿಎಸ್‌ಬಿ, ಆಫ್ರಿಕಾ ಮೂಲಕ ಜಾನ್‌ ಎಂಬ ವ್ಯಕ್ತಿಯು ಕಳೆದ 3-4 ವರ್ಷಗಳಿಂದ ಡಿಕಂಪೆನ್ಸೇಟೆಡ್ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದು ತೀವ್ರವಾದ ಪಿತ್ತಜನಕಾಂಗದ ಹಾನಿ, ಅಸ್ಸೈಟ್ಸ್ (ಹೊಟ್ಟೆಯಲ್ಲಿ ದ್ರವದ ಶೇಖರಣೆ), ಕಾಮಾಲೆ ಮತ್ತು ಉಸಿರಾಟದ ತೊಂದರೆ ಉಂಟು ಮಾಡಲಿದೆ.ಅದೂಅಲ್ಲದೆ, ಅತಿಯಾದ ತೂಕ ಹೊಂದಿದ್ದರಿಂದ ನಿದ್ರೆಯಲ್ಲಿ ಉಸಿರುಗಟ್ಟವಿಕೆ ಸಮಸ್ಯೆಗೆ ಒಳಗಾಗುತ್ತಿದ್ದ ಕಾರಣ ಅವರ ಸ್ಥಿತಿ ಇನ್ನಷ್ಟು ಜಟಿಲವಾಗಿತ್ತು. ಲಿವರ್‌ ಕಸಿ ಮಾಡುವ ಎಂಟು ತಿಂಗಳ ಮೊದಲೇ ಮದ್ಯಪಾನ ಸೇವನೆ ನಿಲ್ಲಿಸಿದ್ದರೂ ಅವರ ಯಕೃತ್ತಿನ ಕಾರ್ಯವು ಕ್ಷೀಣಿಸುತ್ತಲೇ ಇತ್ತು. ಇವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರ ಯಕೃತ್‌ನ ಗುಲ್ಮ ಹಿಗ್ಗಿರುವುದು ತಿಳಿದುಬಂತು.

ಯಕೃತ್ತಿನ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ, ಪಿತ್ತಜನಕಾಂಕದ ವೈಫಲ್ಯ ಹಾಗೂ ಮೆದುಳಿನ ಅಸಮಪರ್ಕ ಕ್ರಿಯೆಯ ಸಮಸ್ಯೆಯ ಉಲ್ಭಣ ಕಂಡು ಬಂತು. ಈ ಎಲ್ಲಾ ಸಮಸ್ಯೆಗೂ ಮೊದಲು ಯಕೃತ್‌ನ ಕಸಿ ಅತ್ಯವಶ್ಯಕವಾಗಿತ್ತು. ಆದರೆ, ಅವರ ಆರೋಗ್ಯದ ಪರಿಸ್ಥಿತಿ ಗಮನಿಸಿದರೆ, ಅವರಿಗೆ ಮೃತದಾನಿಯ ಯಕೃತ್ತನ್ನು ಕಸಿ ಮಾಡುವುದು ಸವಾಲಾಗಿತ್ತು. ಹೀಗಾಗಿ ಅವರಿಗೆ ಜೀವಂತ ದಾನಿಯ ಯಕೃತ್ತಿನ ಅವಶ್ಯಕತೆ ಬಿದ್ದಿತು. ಅವರ 26 ವರ್ಷದ ಸೊಸೆಯೇ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಲು ಮುಂದಾದರು. ನಾವು ಯಕೃತ್ತಿನ ಸಾಮಾನ್ಯಕ್ಕಿಂತ ಚಿಕ್ಕದಾದ ಭಾಗವನ್ನು ಕಸಿ ಮಾಡಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯಾದ 16 ದಿನಗಳ ನಂತರ ರೋಗಿಯು ಕ್ಷೇಮವಾಗಿ ಮನೆಗೆ ತೆರಳಿದರು, ಯಕೃತ್‌ ದಾನ ಮಾಡಿದ ಮಹಿಳೆಯು ಸಹ 7 ದಿನಗಳಲ್ಲಿ ಸುಧಾರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago