ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಕರಣ ಸಂಬಂಧಿಸಿದಂತೆ ಲಂಚ ಪಡೆದ ವೈದ್ಯನನ್ನ ಅಮಾನತು ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು ವಾರ್ಡ್ ಬಾಯ್ ಮೂಲಕ 10ರಿಂದ 15 ಸಾವಿರ ಹಣ ಪಡೆದಿರುವುದು ಸಾಬೀತಾದ ಹಿನ್ನೆಲೆ ಪ್ರಸೂತಿ ತಜ್ಞ ಡಾ.ರಾಮಚಂದ್ರ ಕೆ.ಸಿ ಅವರನ್ನ ಅಮಾನತು ಮಾಡಲಾಗಿದೆ.
ಲೋಕಾಯುಕ್ತರ ತನಿಖೆ ಆಧಾರವಾಗಿಟ್ಟುಕೊಂಡು ವೈದ್ಯರ ವಿರುದ್ಧ ಕ್ರಮ ಜರುಗಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಯುಕ್ತರಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ಅಮಾನತು ಮಾಡಿರೋ ಆರೋಗ್ಯ ಇಲಾಖೆ.