ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದರು.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.
ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.
ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

5 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

8 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

9 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

22 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago