ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತ ವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗ ಮಾತ್ರ ಗುಲಾಮಗಿರಿಯನ್ನು ಮೆಟ್ಟಿನಿಂತು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತ ವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಮೂಲಕ ಸಮಾಜದಲ್ಲಿ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು ಹಾಗೂ ಶೂದ್ರರು ಹೀಗೆ ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರಿಗೆ ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದು ತಿಳಿಸಿದರು.
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದರು.
1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ನಾನು ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಹೇಳಿದರು.
ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ ಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…