Categories: Accident

ಯಾರೂ ಊಹಿಸದ ಅಪಘಾತ: ಕ್ಷಣಾರ್ಧದಲ್ಲಿ ವೇಗವಾಗಿ ಬಂದ ಕಾರು ಬೈಕ್ ಗಳಿಗೆ ಡಿಕ್ಕಿ: ಡಿಕ್ಕಿ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿ‌ ಬಿದ್ದ ಮೂರು ಹೆಣಗಳು: ಹಲವರಿಗೆ ಗಂಭೀರ ಗಾಯ

ವೇಗವಾಗಿ ಬಂದ ಕಾರು ನಾಲ್ಕು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ನಲ್ಲಿ ತೆರಳುತ್ತಿದ್ದವರು ಹಲವು ಹರಿ ಕೆಳಗೆ ಬಿದ್ದಿದ್ದಾರೆ. ಈ ಅವಘಡದಲ್ಲಿ ಕಾರಿನ ಚಾಲಕ ಸೇರಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದ ಸೈಬರ್ ಚೌಕ್‌ನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಟ್ರಾಫಿಕ್ ಲೈಟ್‌ಗಳಿಲ್ಲದ ಜನನಿಬಿಡ ವೃತ್ತದಲ್ಲಿ, 72 ವರ್ಷದ ವ್ಯಕ್ತಿಯಿಂದ ವೇಗವಾಗಿ ಬಂದ ಹ್ಯುಂಡೈ ಸ್ಯಾಂಟ್ರೋ ನಾಲ್ಕು ಬೈಕ್‌ಗಳನ್ನು ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸೈಬರ್ ಚೌಕ್ (ಛೇದಕ)ದಲ್ಲಿ ವಾಹನ ದಟ್ಟಣೆ ಎಂದಿನಂತೆ ಇತ್ತು. ಕಾರುಗಳು, ಟ್ರಕ್‌ಗಳು ಮತ್ತು ಬೈಕ್‌ಗಳು ಟ್ರಾಫಿಕ್ ದೀಪಗಳಿಲ್ಲದೆ ಅಡ್ಡಾದಿಡ್ಡಿ‌ ಚಲಿಸುತ್ತಿದ್ದವು. ಮೂರು ಬೈಕ್‌ಗಳು ನೇರವಾಗಿ ಹೋಗುತ್ತಿದ್ದರೆ, ನಾಲ್ಕನೇ ಬೈಕ್ ಬಲದಿಂದ ಎಡಕ್ಕೆ ಛೇದಕವನ್ನು ದಾಟುತ್ತಿತ್ತು. ಮಧ್ಯಾಹ್ನ 2:26 ಕ್ಕೆ, ವೇಗವಾಗಿ ಬಂದ ಸ್ಯಾಂಟ್ರೋ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಹಲವಾರು ಅಡಿಗಳಷ್ಟು ದೂರ ಹಾರಿ ಬಿದ್ದಿದ್ದಾರೆ.

ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಯುವತಿಯೊಬ್ಬಳು ಬದುಕುಳಿದಿದ್ದಾಳೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು, ಆದರೆ ಮೂವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

16 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

21 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

7 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

8 hours ago