ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ ಮತ್ತೆ ಒಂದಾಗಿ ಪರಸ್ಪರ ಪ್ರೀತಿ ಹಂಚಿಕೊಂಡಿರುವ ಸಂಭ್ರಮದ ಘಟನೆ ದೊಡ್ಡಬಳ್ಳಾಪುರದ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದಿದೆ.
ತಾಲ್ಲೂಕಿನ ವಿವಿಧ 4 ದಂಪತಿಗಳು ಸಾಂಸಾರಿಕ ಕಲಹದಿಂದ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನಂತರ ಆ ಜೋಡಿಗಳಿಗೆ ಮನವೊಲಿಸುವ ಮೂಲಕ ಎರಡು ಜೋಡಿಗಳು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಮೊದಲನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ, 2ನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ರವಿ ಬೇಟೆಗಾರ, ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಹಾಗೂ ಪ್ರಧಾನ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಶಿಲ್ಪಾ ಅವರ ಸಮ್ಮುಖದಲ್ಲಿ ಎರಡು ಜೋಡಿಗಳು ಪರಸ್ಪರ ಹಾರ ಬದಲಿಸಿ ಸಿಹಿ ತಿನ್ನಿಸುವ ಮೂಲಕ ಒಂದಾದರು. ಉಳಿದ ಎರಡು ಜೋಡಿಗಳು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಸಮ್ಮುಖದಲ್ಲಿ ನಗುನಗುತ್ತಾ ಸಾಂಸಾರಿಕ ಜೀವನಕ್ಕೆ ಹಿಂದಿರುಗಿದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರೇಣುಕಾಮೂರ್ತಿ, ನಿರ್ದೇಶಕರಾದ ಕನಕರಾಜು, ಜಗನಾಥ್, ಖಜಾಂಚಿ ಗೀತಾ, ವಕೀಲರುಗಳಾದ ಅಶೋಕ್, ಮಂಜುನಾಥ್ ಹಿರಿಯ ವಕೀಲರಾದ ನಿಸಮ್ ಉಲ್ಲಾ ಖಾನ್, ನರಸಿಂಹಮೂರ್ತಿ ಮಂಜುನಾಥ್, ಮಂಜುಳಾ ಹಾಗೂ ಅನುಪಮ, ಯಮುನಾ ಸೇರಿದಂತೆ ಹಲವರು ಇದ್ದರು.
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…