ಯುಗಾದಿ ಹಬ್ಬದ ಆಚರಣೆ ಸಮಯದಲ್ಲಿ ಜಿಲ್ಲೆಯ ಯಾವುದೇ ಹೋಟೆಲ್, ವಸತಿ ಗೃಹ, ತೋಟದ ಮನೆ , ರಸ್ತೆ ಬದಿಗಳಲ್ಲಿ ಟೆಂಟ್ ನಿರ್ಮಿಸಿ ಜೂಜು, ಮಟ್ಕಾ, ಇಸ್ಪೀಟ್, ಬೆಟ್ಟಿಂಗ್ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಖಡಕ್ ಎಚ್ಚರಿಕೆ ಕೊಟ್ಟಿದ್ದರು. ಆದರೂ ಸಹ ಪೊಲೀಸ್ ಇಲಾಖೆಯ ಎಚ್ಚರಿಕೆಯನ್ನು ಗಾಳಿಗೆ ತೂರಿ ಯುಗಾದಿ ಹಬ್ಬದಂದು ಜೂಜಾಟವಾಡಿದ್ದ 293 ಜನರನ್ನು ವಶಕ್ಕೆ ಪಡೆದು ಅವರ ವಿರುದ್ದ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಜೂಜೂಕೋರರು ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಕೋಳಿ ಪಂದ್ಯ, ಇಸ್ಪೀಟು ಜೂಜಾಟ, ಹಾಗೂ ಇನ್ನಿತರ ಜೂಜಾಟಗಳನ್ನು ಆಡಿ ಪೊಲೀಸರ ಅತಿಥಿಗಳಾಗಿದ್ದಾರೆ.
ಒಟ್ಟು 293 ಜನರ ವಿರುದ್ಧ 48 ಪ್ರಕರಣಗಳನ್ನು ದಾಖಲಿಸಿಕೊಂಡು, ಒಟ್ಟು 2 ಲಕ್ಷ 40 ಸಾವಿರ ಹಣ, ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…