ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹೆಂಡ್ತಿ, ಮಕ್ಕಳಿದ್ದಾರೆ ಒಳ್ಳೆಯವರಾಗಿ ಬದುಕಿ ಎಂದು ಪೊಲೀಸರು ಕರೆದು ಬುದ್ಧಿ ಹೇಳಿದ್ದರು. ಸ್ನೇಹಿತರು, ಆಪ್ತರು ಕರೆದರೂ ಅಂತಾ ಹೋದರೆ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತೀರಾ ಅನ್ನೋ ಎಚ್ಚರಿಕೆ ಕೂಡ ಕೊಟ್ಟಿದ್ದರು. ಪೊಲೀಸರು ಎಷ್ಟೇ ಬುದ್ಧಿವಾದ ಹೇಳಿದರೂ ಬುದ್ಧಿ ಕಲಿಯದ ರೌಡಿಶೀಟರ್ ಇದೀಗ ಹಾದಿಬೀದಿಯಲ್ಲಿ ಹೆಣವಾಗಿ ಹೋಗಿದ್ದಾನೆ.
ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಲಾಗಿತ್ತು. ಈ ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಶಿಫ್ಟ್ ಆಗಿದ್ದ. ನಿನ್ನೆ ಯುಗಾದಿ ಹಬ್ಬ ಹಿನ್ನೆಲೆ ಸ್ನೇಹಿತರು ಕರೆದರೂ ಎಂದು ಕುಣಿಗಲ್ನಿಂದ ಬೆಂಗಳೂರಿಗೆ ರೌಡಿಶೀಟರ್ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ 2 ಬೈಕ್ನಲ್ಲಿ ಬಂದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಚ್ಚಿ ಕೊಲೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…