ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಮದಲ್ಲಿ ಬೈಕ್ ವೀಲಿಂಗ್ ವಿಚಾರ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು

ಯುಗಾದಿ ಹಬ್ಬದ ಸಂದರ್ಭದಲ್ಲಿ ನಶೆಯಲ್ಲಿ ವೀಲಿಂಗ್ ಮಾಡುತ್ತಿರುವಾಗ ಗ್ರಾಮದವರು ಪ್ನಶ್ನೆ ಮಾಡಿದ್ದಕ್ಕೆ  ಯುವಕರು ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಾಳ ಗ್ರಾಮದಲ್ಲಿ ನೆನ್ನೆ ಸಂಜೆ ನಡೆದಿದೆ.

ಮತ್ತೊಂದು ಮಾಹಿತಿ ಪ್ರಕಾರ, ಹೊಸತಡಕು ದಿನ ಇಸ್ಪೀಟ್ ಆಡುವ ವಿಚಾರಕ್ಕೆ ಎರಡು ಯುವಕರ ಗುಂಪಿನ ನಡುವೆ ಜಗಳವಾಗಿದೆ ಎನ್ನಲಾಗಿದೆ. ಹೀಗಾಗಿ ನಡು ರಸ್ತೆಯಲ್ಲಿ ದೊಣ್ಣೆಗಳನ್ನಿಡಿದು ಯುವಕರು ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಂಚಿಗನಾಳ ಗ್ರಾಮದ ಯುವಕರ ಮೇಲೆ ಬಿಡಿಗೆರೆ ಹಾಗೂ ರಾಜಘಟ್ಟ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Leave a Reply

Your email address will not be published. Required fields are marked *

error: Content is protected !!