ಯುವಕನ ಪ್ರೀತಿ ನಿರಾಕರಿಸಿದ ಯುವತಿ: ಪ್ರೀತಿಯಿಂದ ಭಗ್ನಗೊಂಡ ಪಾಗಲ್ ಪ್ರೇಮಿ: ಹಾಡಹಗಲೇ ನಡುರಸ್ತೆಯಲ್ಲಿ ಯುವತಿ ತಲೆಗೆ 15 ಬಾರಿ ಕಬ್ಬಿಣದ ಸಲಾಕೆಯಿಂದ ಮನಸೋಇಚ್ಛೆ ಹೊಡೆದು ಹತ್ಯೆ

ಮುಂಬೈನ ವಸಾಯಿಯ ಚಿಂಚ್ಪಾಡಾದಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಕಬ್ಬಿಣದ ಸಲಾಕೆ (ವ್ರೆಂಚ್‌)ಯಿಂದ ತಲೆಗೆ 15 ಬಾರಿ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.

ಕಬ್ಬಿಣದ ಸಲಾಕೆಯಿಂದ ಪ್ರೇಯಸಿಗೆ 15 ಬಾರಿ ಹೊಡೆದು ಹತ್ಯೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿರುವ ವ್ಯಕ್ತಿ ಸ್ಪ್ಯಾನರ್‌ನಿಂದ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರಿಸಿದಾಗ, “ಕ್ಯುನ್ ಕಿಯಾ ಐಸಾ ಮೇರೆ ಸಾಥ್ (ನನಗೆ ಯಾಕೆ ಹೀಗೆ ಮಾಡಿದ್ದೀರಿ)” ಎಂದು ಹೇಳುವುದು ಕೇಳಿಸಿತು.

ಆಕೆ ಪ್ರಜ್ಞೆ ಇಲ್ಲದೆ ಅಲ್ಲೇ ಬಿದ್ದಿದ್ದಳು, ಇಬ್ಬರ ಗುರುತು ಇನ್ನೂ ಸಿಕ್ಕಿ ಪತ್ತೆಯಾಗಿಲ್ಲ. ಈ ಘಟನೆಯನ್ನು ರಸ್ತೆಯಲ್ಲಿ ಹೋಗುವವವರು ವಿಡಿಯೋ ಮಾಡಿದ್ದಾರೆ.

ಯಾರೂ ಕೂಡ ಭಯದಿಂದ ಆಕೆಯ ರಕ್ಷಣೆಗೆ ಬರಲಿಲ್ಲ, ರಕ್ತದ ಮಡುವಿನಲ್ಲಿ ಆಕೆ ನಿತ್ರಾಣಳಾಗಿ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ರೋಹಿತ್ ಯಾದವ್ ಮತ್ತು ಆರತಿ ಕೆಲವು ದಿನಗಳ ಹಿಂದೆ ದೂರವಾಗಿದ್ದರು. ಆರತಿ ಬೇರೊಬ್ಬನನ್ನು ನೋಡಲಾರಂಭಿಸಿದ್ದಾಳೆ ಎಂದು ಶಂಕಿಸಿದ ರೋಹಿತ್ ಕೋಪದ ಭರದಲ್ಲಿ ಆಕೆಯನ್ನು ಕೊಂದಿದ್ದಾನೆ ಎನ್ನಲಾಗಿದೆ.

ವಲೀವ್ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ, ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಪ್ರಸ್ತುತ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

51 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago