Categories: ಕೋಲಾರ

ಯುವಕರು ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಭಾಗವಹಿಸಲು ಮನವಿ

ಕೋಲಾರ: ರಾಜ್ಯದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎನ್.ಎಸ್.ಯು.ಐ ಪದಾಧಿಕಾರಿಗಳು ಸದಸ್ಯರು ಮತ್ತು ಯುವಕರು ಸಕ್ರಿಯವಾಗಿ ಭಾಗವಹಿಸುವಂತೆ ಎನ್.ಎಸ್.ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಹಾಲ್ ತರೀನ್ ಮನವಿ ಮಾಡಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ ಗಾಂಧಿ ಯುವ ಕಾಂಗ್ರೆಸ್ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಚುನಾವಣೆಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಯುವ ಮತದಾರರೇ ಆಯ್ಕೆ ಮಾಡುವ ವ್ಯವಸ್ಥೆಯನ್ನು ತಂದಿದ್ದು ಇದರಿಂದ ಯುವ ಶಕ್ತಿ ಹೆಚ್ಚಾಗಿ ರಾಜಕೀಯಕ್ಕೆ ಬರಲು ಸಾಧ್ಯವಾಗಿದೆ ಯುವಕರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಮತದಾನ ಮಾಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮತ್ತು ರಾಜ್ಯದಲ್ಲಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಮುಖಂಡರು ಯುವ ಕಾಂಗ್ರೆಸ್‌ನಿಂದ ಬೆಳೆದು ಬಂದಿದ್ದಾರೆ ಯುವ ಕಾಂಗ್ರೆಸ್ ಸದಸ್ಯರಾದವರು ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹಾಗೂ ಬ್ಲಾಕ್ ಅಧ್ಯಕ್ಷ ಸ್ಥಾನಗಳಿಗೆ ಒಟ್ಟು ಆರು ಮತವನ್ನು ಹಾಕಬಹುದು ನಮ್ಮ ಪಕ್ಷದೊಳಗೆ ನಡೆಯುವ ಅಂತರಿಕ ಚುನಾವಣೆಯಲ್ಲಿ ಎಲ್ಲರು ಸಕ್ರಿಯವಾಗಿ ಭಾಗವಹಿಸಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಟಗೊಳಿಸಬೇಕು ಎಂದು ನಿಹಾಲ್ ತರೀನ್ ಮನವಿ ಮಾಡಿದರು.

Ramesh Babu

Journalist

View Comments

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

16 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago