ಯಲಹಂಕ: ಮಹಿಳೆಯರ ಖಾಸಗಿ ಪಿಜಿಗಳಿಗೆ ನುಗ್ಗಿ ಯುವತಿಯರಿಗೆ ಕಿರುಕುಳ ನೀಡಿದ ಹಾಗೂ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಹುಣಸೆ ಸಮೀಪದ ಟೆರ್ರಾಫಾರಂ ಬಳಿ ನಡೆದಿದೆ.
ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಬೆಟ್ಟ ನರೇಶ್ ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ. ಚಿಕ್ಕಜಾಲ ಮತ್ತು ಯಲಹಂಕ ವ್ಯಾಪ್ತಿಯ ಖಾಸಗಿ ಮಹಿಳಾ ಪಿಜಿಗಳಿಗೆ ನುಗ್ಗಿದ್ದ ಈತ, ಯುವತಿಯರಿಗೆ ತನ್ನ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಯುವತಿಯೊಬ್ಬಳ ಮೊಬೈಲ್ ಕಸಿದುಕೊಂಡಿದ್ದಾನೆ ಎನ್ನಲಾಗಿದೆ. ಮತ್ತೋರ್ವ ಯುವತಿಯ ಮೇಲೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಒಂದೇ ದಿನದಲ್ಲಿ ನಡೆದ ಎರಡು ಘಟನೆಗಳಿಂದ ಮಹಿಳಾ ಪಿಜಿಗಳಲ್ಲಿನ ಯುವತಿಯರು ಆತಂಕಕ್ಕೊಳಗಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.
ದೇವನಹಳ್ಳಿ ಎಸಿಪಿ ಶ್ರೀಹರ್ಷ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸಲು ತರಹುಣಸೆ ಸಮೀಪದ ಟೆರ್ರಾಫಾರಂ ಬಳಿ ತೆರಳಿತ್ತು. ಈ ವೇಳೆ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ್ ಅವರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ ಆರೋಪಿ ಹಾಗೂ ಘಟನೆಯಲ್ಲಿ ಗಾಯಗೊಂಡಿರುವ ಪೊಲೀಸರನ್ನು ಯಲಹಂಕ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳಾ ಪಿಜಿಗಳಿಗೆ ನುಗ್ಗಿ ಯುವತಿಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 12 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅವರೆ ಬೆಳೆಯ ಉತ್ಪಾದಕತೆ ಹಾಗೂ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೃಷಿ ವಿಜ್ಞಾನ ಕೇಂದ್ರ,…
ದೊಡ್ಡಬಳ್ಳಾಪುರ: ಪಿಎಲ್‌ಡಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾದ ತಳಗವಾರದ ಟಿ.ವಿ. ಲಕ್ಷ್ಮೀನಾರಾಯಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಅವರ…
ದೊಡ್ಡಬಳ್ಳಾಪುರ : ನಗರದ ಟಿಬಿ ಸರ್ಕಲ್‌ನಲ್ಲಿ ಮಾತೋಶ್ರೀ ಆಸ್ಪತ್ರೆ ಸಹಯೋಗದೊಂದಿಗೆ ಕನಕ ಯುವ ಶಕ್ತಿ ಗೆಳೆಯರ ಬಳಗದ ವತಿಯಿಂದ 539ನೇ…
ದೊಡ್ಡಬಳ್ಳಾಪುರ: ನಗರದ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂವಿಧಾನ…
12ನೇ ಶತಮಾನದ ಸಮಾಜ ಸುಧಾರಕ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತಿಪಾದಕರಾದ ವಿಶ್ವಗುರು ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ…