ಯುವತಿ ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಕೊಲೆ ಆರೋಪಿ ಹೇಳಿದ್ದೇನು? ಇಲ್ಲಿದೆ‌ ಮಾಹಿತಿ ಓದಿ..

ಹುಬ್ಬಳ್ಳಿ : ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್‌, ಪೊಲೀಸರ ಮುಂದೆ ಕಾರಣ ಬಾಯ್ಬಿಟ್ಟಿದ್ದಾನೆ.

ಈ ಸಂಬಂಧ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರೋಪಿ ಪ್ರಕಾರ, ಬಿಸಿಎ ಓದುತ್ತಿರುವಾಗಿನಿಂದ ನೇಹಾ ಮತ್ತು ಫಯಾಜ್‌ ಲವ್‌ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್‌ ಮಾಡುತ್ತಿದ್ದಳಂತೆ. ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದರು.

ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತೇವೆ. ಅಲ್ಲದೆ ಪ್ರಕರಣ ಸಂಬಂಧ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು.

ನಿನ್ನೆ ಸಂಜೆ 4.45ರ ಸುಮಾರಿಗೆ ನೇಹಾ ಕೊಲೆಯಾಗಿದೆ. ಆಕೆ ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆರೋಪಿ ಫಯಾಜ್‌ ಏಕಾಏಕಿ ಆಕೆಯ ಮೇಲೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಕೂಡಲೇ ಕಾಲೇಜಿನ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದರು.

ಇತ್ತ ಚಾಕು ಇರಿದ ಬಳಿಕ ಆರೋಪಿ ಆತನ ಊರಿನ ಕಡೆ ಪರಾರಿಯಾಗಲು ಯತ್ನಿಸಿದ್ದ. ಆದರೆ ಘಟನೆ ನಡೆದು 1 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ನಮ್ಮ ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ಹೇಳಿದರು.

ಘಟನೆ ಖಂಡಿಸಿ‌ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡಲಿ. ನಾವು ಎಲ್ಲದಕ್ಕೂ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

Leave a Reply

Your email address will not be published. Required fields are marked *