ಹುಬ್ಬಳ್ಳಿ : ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್, ಪೊಲೀಸರ ಮುಂದೆ ಕಾರಣ ಬಾಯ್ಬಿಟ್ಟಿದ್ದಾನೆ.
ಈ ಸಂಬಂಧ ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರೋಪಿ ಪ್ರಕಾರ, ಬಿಸಿಎ ಓದುತ್ತಿರುವಾಗಿನಿಂದ ನೇಹಾ ಮತ್ತು ಫಯಾಜ್ ಲವ್ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್ ಮಾಡುತ್ತಿದ್ದಳಂತೆ. ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದರು.
ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತೇವೆ. ಅಲ್ಲದೆ ಪ್ರಕರಣ ಸಂಬಂಧ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸುತ್ತೇವೆ ಎಂದು ಅವರು ತಿಳಿಸಿದರು.
ನಿನ್ನೆ ಸಂಜೆ 4.45ರ ಸುಮಾರಿಗೆ ನೇಹಾ ಕೊಲೆಯಾಗಿದೆ. ಆಕೆ ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆರೋಪಿ ಫಯಾಜ್ ಏಕಾಏಕಿ ಆಕೆಯ ಮೇಲೆ ನಾಲ್ಕೈದು ಬಾರಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಕೂಡಲೇ ಕಾಲೇಜಿನ ಆಡಳಿತ ಮಂಡಳಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಆಕೆ ಸಾವನ್ನಪ್ಪಿದ್ದಾಳೆ ಎಂದರು.
ಇತ್ತ ಚಾಕು ಇರಿದ ಬಳಿಕ ಆರೋಪಿ ಆತನ ಊರಿನ ಕಡೆ ಪರಾರಿಯಾಗಲು ಯತ್ನಿಸಿದ್ದ. ಆದರೆ ಘಟನೆ ನಡೆದು 1 ಗಂಟೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ನಮ್ಮ ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ಹೇಳಿದರು.
ಘಟನೆ ಖಂಡಿಸಿ ಪ್ರತಿಭಟನೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡಲಿ. ನಾವು ಎಲ್ಲದಕ್ಕೂ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…