ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಚಾಲಕ ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿರುವ ಘಟನೆ ಕಸ್ತೂರ್ಬಾ ರಸ್ತೆಯ ಕ್ಷೀನ್ಸ್ ಜಂಕ್ಷನ್ (ಎಂ.ಜಿ.ರಸ್ತೆ) ಬಳಿ ನಡೆದಿದೆ.
ಮೇ 23ರ ಸಂಜೆ 5.40ಕ್ಕೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬಿಎಂಟಿಸಿ ಬಸ್ ಚಾಲಕ ಮತ್ತು ಯುವತಿ ನಡುವೆ ಗಲಾಟೆಯಾಗಿದೆ. ಈ ಹಿನ್ನೆಲೆ ಕ್ಷೀನ್ಸ್ ಜಂಕ್ಷನ್ನಲ್ಲಿ ಕಾರಿನಿಂದ ಇಳಿದ ಯುವತಿ ಬಿಎಂಟಿಸಿ ಬಸ್ ಚಾಲಕನನ್ನು ಪ್ರಶ್ನೆ ಮಾಡುತ್ತಿದ್ದರು. ಆದರೆ, ಚಾಲಕ ಯುವತಿಯ ಮೇಲೆ ಬಸ್ ನುಗ್ಗಿಸಿದ್ದಾನೆ.
ಯುವತಿ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ಸ್ವಲ್ಪ ಯಾಮಾರಿದ್ದರು ಯುವತಿಯ ಜೀವಕ್ಕೆ ಕುತ್ತು ಬರುತ್ತಿತ್ತು. ಚಾಲಕನ ಕೃತ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ.
ಇನ್ನು, ಯುವತಿಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿಎಂಟಿಸಿ ಬಸ್ ಚಾಲಕ ಅಮಾನತು
ಯುವತಿ ಮೇಲೆ ಬಿಎಂಟಿಸಿ ಬಸ್ ಹತ್ತಿಸಲು ಮುಂದಾಗಿದ್ದ ಚಾಲಕ ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…