
ಕೋಲಾರ: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯಡಿ ಪದವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ ನಿರುದ್ಯೋಗ ಭತ್ಯೆ ನೀಡಲಾಗುತ್ತಿದ್ದು ಹೆಚ್ಚು ಪ್ರಚಾರ ಮಾಡುವಂತೆ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿ.ಎಂ ಮುನಿಯಪ್ಪ ತಿಳಿಸಿದರು
ನಗರದ ಹೊರವಲಯದ ಮಂಗಸಂದ್ರದ ಸ್ನಾತಕೋತ್ತರ ಕೇಂದ್ರದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸಮಿತಿಯಿಂದ ವಿಧ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದ ಯುವನಿಧಿಗೆ ಹೆಚ್ಚೆಚ್ಚು ನಿರುದ್ಯೋಗಿ ಪದವೀಧರರನ್ನು ನೋಂದಾಯಿಸುವಂತೆ ಮಾಡಬೇಕು ಪ್ರತಿಯೊಂದು ಕಾಲೇಜುಗಳಲ್ಲಿ ನೋಂದಣಿಗೆ ಸಂಬಂಧಿಸಿದಂತೆ ಅಭಿಯಾನ ನಡೆಸಬೇಕು ವಿಧ್ಯಾರ್ಥಿಗಳು ಒಬ್ಬರಿಂದ ಇನ್ನೊಬ್ಬರಿಗೆ ಪ್ರಚಾರ ಮಾಡಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು
ಪದವೀಧರ, ಸ್ನಾತಕೋತ್ತರ ಪದವೀಧರರರಿಗೆ ತಿಂಗಳಿಗೆ 3 ಸಾವಿರ. ಹಾಗೂ ಡಿಪ್ಲೊಮಾ ಮಾಡಿದವರಿಗೆ 1,500 ರೂಪಾಯಿಗಳ ನಿರುದ್ಯೋಗ ಭತ್ತೆ ನೀಡಲಾಗುತ್ತಿದೆ ಉದ್ಯೋಗ ಮಾಡುತ್ತಿಲ್ಲ ರಾಜ್ಯದವರು ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ತೇರ್ಗಡೆ ಹೊಂದಿದರು ಉದ್ಯೋಗ ಸಿಗದಿರುವ ಹಾಗೂ ಉನ್ನತ ವ್ಯಾಸಂಗಕ್ಕೆ ದಾಖಲಾಗದವರು ನೋಂದಣಿ ಮಾಡಬಹುದು ನೋಂದಾಯಿಸಲು ನೋಂದಣಿ ಸಹಾಯ ಕೇಂದ್ರಗಳನ್ನು ಕಾಲೇಜುಗಳಲ್ಲಿ ತೆಗೆಯಲಾಗುತ್ತದೆ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಮಾತನಾಡಿ ಸರ್ಕಾರವು ನುಡಿದಂತೆ ನಡೆಯುತ್ತಿದೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ನೇರವಾಗಿ ಪಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸುತ್ತಿದೆ ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗಿದೆ ಯೋಜನೆಗಳ ಅರ್ಜಿ ಸಲ್ಲಿಸಲು ಮನವಿ ಮಾಡಿದರು
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥೆ ಕುಮದಾ, ತಾಪಂ ಇಒ ಮಂಜುನಾಥ್, ನೆಹರು ಯುವ ಕೇಂದ್ರದ ಶ್ರೀನಿವಾಸ್, ಪಿಡಿಒ ಮಂಜುನಾಥ್ ಪ್ರಸಾದ್ ಮುಂತಾದವರು ಇದ್ದರು