ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ: ಜೆ.ರಾಜೇಂದ್ರ

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನಾಗಿ ಶ್ರೀ ದೇವರಾಜ ಅರಸ್ ವಿದ್ಯಾ ಸಂಸ್ಥೆಯಲ್ಲಿ ಆಚರಿಸಲಾಯಿತು.

ಶ್ರೀ ದೇವರಾಜ ಅರಸ್ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಜನತೆಯ ಪ್ರಮಾಣ ಹೆಚ್ಚಿದ್ದು, ಈ ಯುವಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕಿದೆ.

ಯುವಜನರಿಗೆ ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕವಾಗಿದ್ದು, ಅವರ ಸಾಧನೆ, ಮಾರ್ಗದರ್ಶನಗಳನ್ನು ಪಾಲಿಸಿದರೆ ಬದುಕಲ್ಲಿ ಯಶಸ್ಸು ಸಾಧಿಸಬಹುದಾಗಿದೆ.

ಹಾದಿ ತಪ್ಪುತ್ತಿರುವ ಯುವ ಜನತೆಗೆ ವಿವೇಕಾನಂದರ ನುಡಿಗಳು, ತತ್ವಾದರ್ಶಗಳು ಸಂಜೀವಿನಿಯಾಗಿದ್ದು, ಯುವ ಪೀಳಿಗೆ ವಿವೇಕಾನಂದರ ನಡೆ ನುಡಿಗಳನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ವಿವೇಕಾನಂದರ ಬದುಕು ಹಾಗೂ ಸಾಧನೆಗಳ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಪ್ರಖರ ಸಂದೇಶದಿಂದ ಅಂಧಕಾರದಲ್ಲಿ ಮುಳುಗಿದ್ದ ಭಾರತದ ಯುವಜನತೆಯಲ್ಲಿ ಜಾಗೃತಿ ಮೂಡಿಸಿದರು.

ಭಾರತದ ಹಿರಿಮೆಯನ್ನು ಪ್ರಪಂಚದಾದ್ಯಂತ ಸಾರಿದವರು. ಬಾಲ್ಯದಲ್ಲಿಯೇ ವಿವೇಕಾನಂದರು ಆಧ್ಯಾತ್ಮ ದತ್ತ ವಾಲುತ್ತಿರುವ ಲಕ್ಷಣಗಳು ಗೋಚರಿಸುತ್ತಿತ್ತು. ಆಧ್ಯಾತ್ಮವೆಂದರೆ ತನ್ನನ್ನು ತಾನು ಅರಿತು, ಪರಿಪೂರ್ಣ ಮಾನವನಾಗಬೇಕಿರುವುದು.

ಎಲ್ಲಾ ಧರ್ಮಗಳ ಸಾರವೂ ಸಹ ಮಾನವೀಯತೆಯನ್ನೇ ಪ್ರತಿಪಾದಿಸುತ್ತದೆ. ಈಗಿನ ಪೀಳಿಗೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬದುಕನ್ನು ಹಾಗೂ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿವೇಕಾನಂದರ ಜಾಗೃತಿಯ ಮಾತುಗಳು ಯುವಜನತೆಗೆ ಬೇಕಾಗಿವೆ.

ಇಂದು ಸರ್ಕಾರ ರಾಷ್ಟ್ರೀಯ ಯುವಜನವನ್ನಾಗಿ ಆಚರಿಸುತ್ತಿದ್ದು, ಯುವ ನೀತಿಯನ್ನು ಜಾರಿ ಮಾಡುತ್ತಿದೆ. ಇದರರ್ಥ ದೇಶದ ಪ್ರಗತಿಯಲ್ಲಿ ಯುವ ಜನರ ಪಾತ್ರ ಮಹತ್ವದ್ದಾಗಿದ್ದು, ಯುವ ಶಕ್ತಿಯ ಮೂಲಕ ದೇಶದ ಭವಿಷ್ಯವನ್ನು ಸದೃಢಗೊಳಿಸುವುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್.ಎಲ್ ಜಾಲಪ್ಪ ವಿದ್ಯಾಸಂಸ್ಥೆಯ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕರಾದ ಬಾಬುರೆಡ್ಡಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್‍ಎಸ್‍ಎಸ್ ಅಧಿಕಾರಿಗಳಾದ ಲಕ್ಷ್ಮೀಶ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

2 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

12 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

14 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

16 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

21 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 day ago