ಯುವ ಪ್ರತಿಭಾವಂತರ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವುದು ಯುವಸೌರಭ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ತಿಳಿಸಿದರು.
ನಗರದ ಜವಾಹರ್ ನವೋದಯ ವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಯುವಸೌರಭ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿ, ಸಾಂಸ್ಕೃತಿಕ ಪರಂಪರೆಯ ಅರಿವು ಯುವಜನತೆಯಲ್ಲಿ ಇರಬೇಕು. ಕಲೆ ಮತ್ತು ಸಾಹಿತ್ಯದ ಆಸಕ್ತಿಯು ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣದಲ್ಲಿ ಸಹಕಾರಿ ಆಗುತ್ತದೆ ಎಂದರು.
ಯುವ ಸೌರಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ಆರ್.ಚಕ್ರವರ್ತಿ ವಹಿಸಿದ್ದರು. ಸಮಾರಂಭದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ. ಪಿ.ಗೋವಿಂದರಾಜು, ನವೋದಯ ವಿದ್ಯಾಲಯ ಕನ್ನಡ ಪ್ರಾಧ್ಯಾಪಕ ಜೆ.ಪಿ.ಉಪಾಧ್ಯೆ, ಜಾನಪದ ಕಲಾವಿದರುಗಳಾದ ಶ್ಯಾಕಲದೇವನಪುರ ರಾಮಚಂದ್ರಯ್ಯ, ವಿಜಯಕುಮಾರ್, ನವೋದಯ ವಿದ್ಯಾಲಯದ. ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…