ಕೊಟ್ಟೂರು: ಪಟ್ಟಣದ ಉಜ್ಜಿನಿ ರಸ್ತೆಯಲ್ಲಿರುವ ಯುವಿ ಫೈನಾನ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಎಲ್ಲಾ ವಿದ್ಯಾರ್ಥಿಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನಿಗದಿ ಪಡಿಸಲಾಗಿತ್ತು. ಅದರಂತೆಯೇ ಅತೀ ಹೆಚ್ಚು ಅಂಕ ಗಳಿಸಿದ ರಮೇಶ್ ಕಂಬತ್ತಳ್ಳಿ ಎಂಬ ವಿದ್ಯಾರ್ಥಿಗೆ ಲ್ಯಾಪ್ ಟಾಪ್ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಯನ್ನು ಬೆಳ್ಳಿ ರಥದಲ್ಲಿ ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು.
ಈ ಮೆರವಣಿಗೆಯು ಉಜ್ಜಿನಿ ರಸ್ತೆಯಿಂದ ಪ್ರಾರಂಭಗೊಂಡು ಬಸ್ ನಿಲ್ದಾಣ ಮುಂದೆ ಹಾದು ಮರಿ ಕೊಟ್ಟೂರೇಶ್ವರ ದೇವಸ್ಥಾನ ತಲುಪಿ, ನಂತರ ಬನಶಂಕರಿ ದೇವಸ್ಥಾನದಿಂದ ಉಜ್ಜಿನಿ ರಸ್ತೆಗೆ ತಲುಪಿತು.
ಈ ಸಂದರ್ಭದಲ್ಲಿ ಸಾಯಿಕುಮಾರ್, ಬಸವರಾಜ, ಅಡಿವೆಪ್ಪ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.