ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಪಡೆದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ ಎ ಚಲ್ಲಯ್ಯ ಶ್ಲಾಘಿಸಿದರು.

ಇಂದು ಬೆಸೆಂಟ್ ಪಾರ್ಕ್ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೂಕಂಪನ, ಭೂಕುಸಿತ, ಪ್ರವಾಹ, ಸುನಾಮಿ, ಬರಗಾಲ, ಅಗ್ನಿ ಆಕಸ್ಮಿಕ ಸಂದರ್ಭದಲ್ಲಿ ಪ್ರಾಥಮಿಕ ಮಟ್ಟದ ಶೋಧನೆ ಮತ್ತು ರಕ್ಷಣೆ, ಕಾಡ್ಗಿಚ್ಚು ನಂದಿಸುವಿಕೆ, ಸಮುದಾಯ ಆಧಾರಿತ ಆರೋಗ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯಾಘಾತ ಸಂಭವಿಸಿದಾಗ ಸಿಪಿಆರ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ತಿಳಿಸಿದರು.

ವಿಪತ್ತು ಯಾವ ಸಂದರ್ಭದಲ್ಲಿ ಹೇಗೆ ಸಂಭವಿಸುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಅಕಸ್ಮಾತ್ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಹೇಗೆ ಧೈರ್ಯದಿಂದ ನಿರ್ವಹಿಸಬೇಕು ಎಂಬುದನ್ನು ಎಲ್ಲ ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಕರೆ ನೀಡಿದರು.

ವಿಪತ್ತು ಸಂಭವಿಸದರೆ ಸಾರ್ವಜನಿಕರನ್ನು ಹೇಗೆ ರಕ್ಷಣೆ ಮಾಡಬೇಕು ಸುರಕ್ಷಿತವಾದ ಸ್ಥಳಕ್ಕೆ ಅವರನ್ನು ಹೇಗೆ ಸಾಗಿಸಬೇಕು ಎಂಬುದರ ಕುರಿತು ವಿಪತ್ತು ಸನ್ನದ್ಧತೆ ತರಬೇತಿ ನೀಡಲಾಗಿದೆ ಎಂದರು…

ವಿಪತ್ತು ನಿರ್ವಹಣೆ ಕುರಿತು ಒಂದು ವಾರ ನಡೆದ ತರಬೇತಿ‌ಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…

ತರಬೇತಿಯಲ್ಲಿ ಉತ್ತಮ ನಡತೆಯಿಂದ ನಡೆದುಕೊಂಡ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು…

ಈ ವೇಳೆ ಮೈ ಭರತ್ ರಾಜ್ಯ ಸಂಚಾಲಕ ಅಶೋಕ್ ಕುಮಾರ್ ದಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯಕ್ರಮ ಸಹಾಯಕಿ ಲತಾ ಬಿ ವಿ, ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ ಎ ಚಲ್ಲಯ್ಯ, ನನ್ನ ಭಾರತ ಸಂಯೋಜಕಿ ಜೆಮೈಮಾ ಜೇಸು ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

1 hour ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

2 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

14 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

15 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

15 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago