ಕೋಲಾರ: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯ ಕೋಲಾರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ಕಾಂಗ್ರೆಸ್ ಪಕ್ಷದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡುವ ಮೂಲಕ ನನ್ನನ್ನು ಬೆಂಬಲಿಸುವಂತೆ ಅಭ್ಯರ್ಥಿ ಜುನೈದ್ ಖಾನ್ ಮನವಿ ಮಾಡಿದ್ದಾರೆ.
ಕೋಲಾರ ನಗರ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ದುಡಿದಿದ್ದೇನೆ 2016 ರಿಂದ ಎನ್.ಎಸ್.ಐ.ಯು, ತಾಲೂಕು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದು ಈಗ ಕೋಲಾರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು ಕಾಂಗ್ರೆಸ್ ಪಕ್ಷವನ್ನು ಯುವಕರ ಮಧ್ಯೆ ಬಲಿಷ್ಠವಾಗಿ ಕಟ್ಟಲು ಒಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಮೂಲತಃ ಕಾಂಗ್ರೆಸ್ ಕುಟುಂಬದಿಂದ ಬಂದ ನಾನು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯರ ಮತ್ತು ಕಿರಿಯರ ಮಾರ್ಗದರ್ಶನದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದು ನನ್ನ ಕ್ರಮ ಸಂಖ್ಯೆ 5 ಆಗಿದ್ದು ಯುವ ಕಾಂಗ್ರೆಸ್ ಸದಸ್ಯ ಪಡೆಯಲು ಐವೈಸಿ ಆ್ಯಫ್ ಮೂಲಕ ಮತದಾನ ಮಾಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕಾಗಿ ಮನವಿ ಮಾಡಿದರು.