ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ ನವೀನ್ ಕುಮಾರ್ ಡಿ.ಜಿ. ಅವರನ್ನು ನೇಮಕ ಮಾಡಲಾಗಿದೆ.
ನೇಮಕಗೊಂಡಿರುವ ನವೀನ್ ಕುಮಾರ್ ಡಿ.ಜಿ. ಅವರನ್ನು ಮಾಜಿ ಶಾಸಕ ಹಾಗೂ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಟಿ. ವೆಂಕಟರಮಣಯ್ಯ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಸಿ. ಶಶಿಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಪುನೀತ್ ಮಲ್ಲೋಹಳ್ಳಿ, ರಾಕೇಶ್ ಗೌಡ, ತಾಲ್ಲೂಕು ಉಪಾಧ್ಯಕ್ಷ ಹರ್ಷಿತ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನವೀನ್ ಕುಮಾರ್ ಡಿ.ಜಿ. ಅವರಿಗೆ ಶುಭ ಹಾರೈಸಿದ ಮುಖಂಡರು, ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಆಶಿಸಿದರು.
