ಕೋಲಾರ: ರಾಜ್ಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾರ್ಚ್ 17 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಗ್ರೇಟ್ ನಂ 4 ರಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವ ಸಂಕಲ್ಪ ಸಮಾವೇಶ ಹಾಗೂ ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸುವಂತೆ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಆರ್.ಕೆ ದಿವ್ಯ ತಿಳಿಸಿದರು.
ನಗರದ ಹೊರವಲಯದ ಆರಾಧ್ಯ ಹೋಟೆಲ್ ನಲ್ಲಿ ಬುಧವಾರ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರಿದ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಆಯ್ಕೆಯಾದ ರಾಜ್ಯ ಘಟಕದಿಂದ ಜಿಲ್ಲಾ ಸಮಿತಿ, ವಿಧಾನಸಭಾ ಸಮಿತಿ ಹಾಗೂ ಬ್ಲಾಕ್ ಸಮಿತಿ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಯುವ ಸಮುದಾಯವನ್ನು ಸಮಾವೇಶದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ತಿಳಿಸಿದರು.
ಯುವಕರೇ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿದ್ದು ಯುವಕರೇ ಮುಂದೆ ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕಾಗಿದೆ ಪಕ್ಷದಲ್ಲಿ ಶಿಸ್ತು ಪಾಲನೆ ಅತೀ ಮುಖ್ಯವಾಗಿದೆ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ದೇಶದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರವು ಸುಳ್ಳು ಹೇಳುತ್ತಲೇ ಅಧಿಕಾರ ನಡೆಸುತ್ತಿದೆ. ಇಂದು ದೇಶದ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಇದನ್ನು ಸೋಶಿಯಲ್ ಮೀಡಿಯಾ ಮೂಲಕ ಜನತೆಗೆ ತಿಳಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೇತೃತ್ವ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎನ್ ಸುನೀಲ್ ಗೌಡ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುವ ಮೂಲಕ ಎಲ್ಲರೂ ನಾಯಕರಾಗಬೇಕು ಪಕ್ಷದ ತತ್ವ ಸಿದ್ಧಾಂತದ ಮೇಲೆ ನಾವು ಮುಂದುವರೆಯಬೇಕು.ಬೂತ್ ಮಟ್ಟದಲ್ಲಿ ಯುವಕರನ್ನು ಸಂಘಟಿಸಿ ಪಕ್ಷ ಬೆಳೆಯುವಂತೆ ಮಾಡಬೇಕು ಪಕ್ಷದ ವೃದ್ದಿಗಾಗಿ ಏನೆಲ್ಲಾ ಯುವಕರಿಂದ ಮಾಡಬಹುದೋ ಅದೆಲ್ಲವನ್ನೂ ಮಾಡಬೇಕು ವಿವಿಧ ಕಾರ್ಯಕ್ರಮಗಳ ಮೂಲಕ ಯುವಕರನ್ನು ಪಕ್ಷಕ್ಕೆ ಸೆಳೆಯುವ ಕೆಲಸವನ್ನು ಮಾಡಬೇಕು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರಿದ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಕಾಂಗ್ರೆಸ್ ಪಾತ್ರ ಪ್ರಮುಖವಾಗಿದೆ. ರಾಜ್ಯದ ಕಾಂಗ್ರೆಸ್ ಸರಕಾರ ಜನರ ಹಿತ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿ ತಂದಿದೆ ಇದು ಪ್ರತೀ ಮನೆಗೂ ಮುಟ್ಟಿದೆ ಇದೆಲ್ಲವನ್ನೂ ಜನರ ಬಳಿ ಹೇಳುವ ಮೂಲಕ ಯುವ ಪೀಳಿಗೆಯನ್ನು ಕಾಂಗ್ರೆಸ್ ನತ್ತ ಸೆಳೆಯಬೇಕು ಜೊತೆಗೆ ಬೆಂಗಳೂರಿನಲ್ಲಿ ನಡೆಯವ ಯುವ ಸಂಕಲ್ಪ ಸಮಾವೇಶ ಮತ್ತು ರಾಜ್ಯ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಪದಾಧಿಕಾರಿಗಳ ಪದಹ್ರಹಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದರು
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್ ಕೃಷ್ಣದೇವರಾಯ, ಜಿಲ್ಲಾ ಉಪಾಧ್ಯಕ್ಷರಾದ ಹರೀಶ್, ವಾಸುದೇವರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಅಭಿಷೇಕ್, ಕಾಮ್ರಾನ್, ರಾಜೇಶ್, ಷಮ್ಸ್, ತಾಲೂಕು ಮತ್ತು ಬ್ಲಾಕ್ ಅಧ್ಯಕ್ಷರಾದ ಸುಹೈಲ್, ಸಕ್ಲೇನ್, ಲಾರೆನ್ಸ್, ತನ್ವೀರ್, ಸುರೇಶ್, ಮನೋಹರ್, ಅರ್ಬಾಜ್, ಬರ್ಕಾತುಲ್ಲಾ, ಅಕ್ಷಯ್, ವಸಂತ್, ಧನುಷ್, ಪ್ರಮೋದ್, ತಯಬ್ , ಅಬ್ದುಲ್ ಮುಂತಾದವರು ಇದ್ದರು.