Categories: ಕೋಲಾರ

ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾರ್ಚ್ 17 ರಂದು ಯುವ ಸಂಕಲ್ಪ ಸಮಾವೇಶ,ಹಾಗೂ ರಾಜ್ಯ ಅಧ್ಯಕ್ಷರ ಪದಗ್ರಹಣ

ಕೋಲಾರ: ರಾಜ್ಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾರ್ಚ್ 17 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ಗ್ರೇಟ್ ನಂ 4 ರಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವ ಸಂಕಲ್ಪ ಸಮಾವೇಶ ಹಾಗೂ ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸುವಂತೆ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಆರ್.ಕೆ ದಿವ್ಯ ತಿಳಿಸಿದರು.

ನಗರದ ಹೊರವಲಯದ ಆರಾಧ್ಯ ಹೋಟೆಲ್ ನಲ್ಲಿ ಬುಧವಾರ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರಿದ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಆಯ್ಕೆಯಾದ ರಾಜ್ಯ ಘಟಕದಿಂದ ಜಿಲ್ಲಾ ಸಮಿತಿ, ವಿಧಾನಸಭಾ ಸಮಿತಿ ಹಾಗೂ ಬ್ಲಾಕ್ ಸಮಿತಿ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಯುವ ಸಮುದಾಯವನ್ನು ಸಮಾವೇಶದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ತಿಳಿಸಿದರು.

ಯುವಕರೇ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯಾಗಿದ್ದು ಯುವಕರೇ ಮುಂದೆ ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕಾಗಿದೆ ಪಕ್ಷದಲ್ಲಿ ಶಿಸ್ತು ಪಾಲನೆ ಅತೀ ಮುಖ್ಯವಾಗಿದೆ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ದೇಶದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರವು ಸುಳ್ಳು ಹೇಳುತ್ತಲೇ ಅಧಿಕಾರ ನಡೆಸುತ್ತಿದೆ. ಇಂದು ದೇಶದ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಇದನ್ನು ಸೋಶಿಯಲ್ ಮೀಡಿಯಾ ಮೂಲಕ ಜನತೆಗೆ ತಿಳಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೇತೃತ್ವ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎನ್ ಸುನೀಲ್ ಗೌಡ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುವ ಮೂಲಕ ಎಲ್ಲರೂ ನಾಯಕರಾಗಬೇಕು ಪಕ್ಷದ ತತ್ವ ಸಿದ್ಧಾಂತದ ಮೇಲೆ ನಾವು ಮುಂದುವರೆಯಬೇಕು.ಬೂತ್ ಮಟ್ಟದಲ್ಲಿ ಯುವಕರನ್ನು ಸಂಘಟಿಸಿ ಪಕ್ಷ ಬೆಳೆಯುವಂತೆ ಮಾಡಬೇಕು ಪಕ್ಷದ ವೃದ್ದಿಗಾಗಿ ಏನೆಲ್ಲಾ ಯುವಕರಿಂದ ಮಾಡಬಹುದೋ ಅದೆಲ್ಲವನ್ನೂ ಮಾಡಬೇಕು ವಿವಿಧ ಕಾರ್ಯಕ್ರಮಗಳ ಮೂಲಕ ಯುವಕರನ್ನು ಪಕ್ಷಕ್ಕೆ ಸೆಳೆಯುವ ಕೆಲಸವನ್ನು ಮಾಡಬೇಕು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರಿದ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಕಾಂಗ್ರೆಸ್ ಪಾತ್ರ ಪ್ರಮುಖವಾಗಿದೆ. ರಾಜ್ಯದ ಕಾಂಗ್ರೆಸ್ ಸರಕಾರ ಜನರ ಹಿತ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿ ತಂದಿದೆ ಇದು ಪ್ರತೀ ಮನೆಗೂ ಮುಟ್ಟಿದೆ ಇದೆಲ್ಲವನ್ನೂ ಜನರ ಬಳಿ ಹೇಳುವ ಮೂಲಕ ಯುವ ಪೀಳಿಗೆಯನ್ನು ಕಾಂಗ್ರೆಸ್‌ ನತ್ತ ಸೆಳೆಯಬೇಕು ಜೊತೆಗೆ ಬೆಂಗಳೂರಿನಲ್ಲಿ ನಡೆಯವ ಯುವ ಸಂಕಲ್ಪ ಸಮಾವೇಶ ಮತ್ತು ರಾಜ್ಯ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಪದಾಧಿಕಾರಿಗಳ ಪದಹ್ರಹಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದರು

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಭರತ್ ಕೃಷ್ಣದೇವರಾಯ, ಜಿಲ್ಲಾ ಉಪಾಧ್ಯಕ್ಷರಾದ ಹರೀಶ್, ವಾಸುದೇವರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಅಭಿಷೇಕ್, ಕಾಮ್ರಾನ್, ರಾಜೇಶ್, ಷಮ್ಸ್, ತಾಲೂಕು ಮತ್ತು ಬ್ಲಾಕ್ ಅಧ್ಯಕ್ಷರಾದ ಸುಹೈಲ್, ಸಕ್ಲೇನ್, ಲಾರೆನ್ಸ್, ತನ್ವೀರ್, ಸುರೇಶ್, ಮನೋಹರ್, ಅರ್ಬಾಜ್, ಬರ್ಕಾತುಲ್ಲಾ, ಅಕ್ಷಯ್, ವಸಂತ್, ಧನುಷ್, ಪ್ರಮೋದ್, ತಯಬ್ , ಅಬ್ದುಲ್ ಮುಂತಾದವರು ಇದ್ದರು.

Ramesh Babu

Journalist

Recent Posts

ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಅವಾಜ್… ಬಿತ್ತು ಎಫ್ ಐಆರ್..!

ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು…

1 hour ago

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…

4 hours ago

ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…

6 hours ago

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…

9 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್‌ ಟನ್ ಮೆಕ್ಕೆಜೋಳ ಖರೀದಿ- ಇನ್ನೂ 76,430 ಮೆಟ್ರಿಕ್‌ ಟನ್‌ ಖರೀದಿಸಲು ಬಾಕಿಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

23 hours ago