ಯುವ ಘಟಕದಿಂದ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಿಗೆ ಅಭಿನಂದನೆ

ದೇವನಹಳ್ಳಿ: ನೂತನವಾಗಿ ಆಯ್ಕೆಯಾದ ಬಿಜೆಪಿ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್‌ ಗೌಡ ಅವರನ್ನು ಬಿಜೆಪಿ ತಾಲೂಕು ಯುವ ಘಟಕದ ವತಿಯಿಂದ ದೇವನಹಳ್ಳಿ ಪ್ರವಾಸಿಮಂದಿರದಲ್ಲಿ ಅಭಿನಂದಿಸಿದರು.

ಈ ವೇಳೆಯಲ್ಲಿ ನೂತನ ದೇವನಹಳ್ಳಿ ಮಂಡಲ ಅಧ್ಯಕ್ಷರಾದ ನಿಲೇರಿ ಅಂಬರೀಶ್‌ ಗೌಡ ಮಾತನಾಡಿ ನನ್ನ ಕರ್ತವ್ಯ ನಿಭಾಯಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಮತ್ತು ಮುಖಂಡರೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಾರೆಂಬ ವಿಶ್ವಾಸವಿದೆ. ನಾನು ಪಕ್ಷದಲ್ಲಿ ಅನೇಕ ವರ್ಷಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ ಪಕ್ಷ ನನ್ನನ್ನು ಗುರುತಿಸಿ ನೀಡಿದ ಜವಬ್ದಾರಿಯನ್ನು ನಿಬಾಯಿಸುತ್ತೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ವಿಶ್ವಾಸವಿದೆ. ಯುವ ಘಟಕ ಸದಾ ನಮ್ಮ ಪಕ್ಷದ ಬೆನ್ನೆಲುಬಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ದೇ.ಸು.ನಾಗಾರಾಜ್, ಸುರೇಶಾಚಾರ್, ಸುನೀಲ್, ವಿಜಯ ರಾಘವೇಂದ್ರ,ಯುವ ಘಟಕದ ಪದಾಧಿಕಾರಿಗಳು ಮುಂತಾದವರು ಇದ್ದರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

7 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

1 day ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago