Categories: ಕೋಲಾರ

ಯುವ ಪೀಳಿಗೆಗೆ ಜಾನಪದವನ್ನ ಪರಿಚಯಿಸಬೇಕು- ಸಿಎಂಆರ್ ಶ್ರೀನಾಥ್

ಕೋಲಾರ : ಜಾನಪದದ ಎಲ್ಲಾ ಪ್ರಾಕಾರಗಳ ಕಲಾವಿದರನ್ನು ಗೌರವಿಸಿ, ಕಲೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವಂತ ಕೆಲಸ ಆಗಬೇಕಿದೆ ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಹೇಳಿದರು.

ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಭಾನುವಾರ ಆಯುಷ್ ಟಿವಿ, ಜಾನಪದ ಗಾಯಕ ಗೋ.ನಾ.ಸ್ವಾಮಿ ಮತ್ತು ಸಿಎಂಆರ್ ಶ್ರೀನಾಥ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಗ್ಗಣ್ಣಕ್ಕ ಗಾಯನ ಕಾರ್ಯಕ್ರಮದ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋಲಾರ ನೆಲದಲ್ಲಿ ನೂರಾರು ಜಾನಪದ ಕಲೆಗಳು ಹಾಗೂ ಲೆಕ್ಕವಿಲ್ಲದಷ್ಟು ಮಂದಿ ಕಲಾವಿದರು ಇದ್ದರು, ಆದರೆ, ಈಗ ಅನೇಕ ಕಲೆಗಳು ನೇಪಥ್ಯಕ್ಕೆ ಸರಿದಿವೆ, ಇಂತ ಕಲೆ ಮತ್ತು ಕಲಾವಿದರ ಬಗ್ಗೆ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಿ ಜಾನಪದ ಗ್ರಂಥಾಲಯದ ಮೂಲಕ ಯುವ ಪೀಳಿಗೆಗೆ ಪರಿಚಯಿಸಬೇಕೆಂದು ಅವರು ಹೇಳಿದರು.

ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಕೋಲಾರ ಜಿಲ್ಲೆಯಿಂದಲೇ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಸ್ಥಳೀಯ ಕಲಾವಿದರು ಸದ್ಬಳಕೆ ಮಾಡಿಕೊಂಡು ಮುಂದುವರೆಸಬೇಕೆಂದು ಸಲಹೆ ನೀಡಿದರು.

ಜಾನಪದ ಗಾಯಕ ಗೋ.ನಾ.ಸ್ವಾಮಿ ಮಾತನಾಡಿ, ಜಾನಪದವೂ ತಮಗೆ ಎಲ್ಲವನ್ನು ಕೊಟ್ಟಿದೆ, ವಿಶ್ವದ 65 ದೇಶಗಳಲ್ಲಿ ಜಾನಪದ ಹಾಡುಗಳನ್ನು ಹಾಡಿದ್ದೇನೆ, ಇದೀಗ ತವರೂರ ಕಲಾವಿದರ ಸೇವೆ ಮಾಡಲು ಬಂದಿದ್ದೇನೆ, ಆಯ್ಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತದೆ, ಆಯ್ಕೆಯಾದ 16 ಮಂದಿಗೆ ಮುಂದಿನ ಭಾನುವಾರ ಭರ್ಜರಿ ವೇದಿಕೆಯಲ್ಲಿ ಹಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಿಸಿದರು.

ಭಾರತಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ಜಾನಪದದಿಂದ ಜಗತ್ತು ಸುತ್ತಬಹುದು ಎಂದು ಗೋ.ನಾ.ಸ್ವಾಮಿ ತೋರಿಸಿಕೊಟ್ಟಿದ್ದಾರೆ, ಕೋಲಾರ ಜಿಲ್ಲೆಯ ಪ್ರತಿ ಮನೆ ಮನದಲ್ಲಿ ಅಡಗಿರುವ ಜಾನಪದ ಕಲೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಕಲ್ಪಿಸಿದ್ದಾರೆ. ಇದನ್ನು ಸದುಪಯೋಗಿಸಿಕೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಲಾವಿದರಾಗಿ ಹೊರಹೊಮ್ಮಬೇಕೆಂದರು.

ಇದೇ ಸಂದರ್ಭದಲ್ಲಿ ತಮಟೆ ನಾಗರಾಜ್, ರೋಟರಿ ಸೆಂಟ್ರಲ್ ಕಾರ್ಯದರ್ಶಿ ಎಸ್.ಸುಧಾಕರ್, ಅವಿನಾಶ್ ಬಾಬು, ಬಣಕನಹಳ್ಳಿ ನಟರಾಜ್, ತೀರ್ಪುಗಾರರಾಗಿ ಆಗಮಿಸಿದ್ದ ಶಿವಕುಮಾರ್, ಕುಮಾರ್, ತಬಲ ರಮಣ ಮತ್ತಿತರರು ಇದ್ದರು.

 

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

6 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

8 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

11 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

12 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

15 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

15 hours ago