
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿ ರವಿಕುಮಾರ್ ಕೆ.ಎಂ. ಅವರು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದರೆ, ಪುನೀತ್ ಕುಮಾರ್ ಎಸ್. ಅವರು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸ್ಪರ್ಧೆಯಲ್ಲಿ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆ, ವಾಕ್ಚಾತುರ್ಯ, ವಿಷಯಜ್ಞಾನ ಹಾಗೂ ಸಂಸದೀಯ ಚರ್ಚಾ ಕೌಶಲವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಭಾಗವಹಿಸುವಿಕೆ ಮತ್ತು ಪ್ರದರ್ಶನಕ್ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಕಾನೂನು ವಿಭಾಗದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದ್ದು, ಮುಂಬರುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ
- ಗಂಗೋತ್ರಿ ಎನ್
- ರವಿಕುಮಾರ್ ಕೆ.ಎಂ
- ಅನುಪಮಾ ಎ
- ಪುನೀತ್ ಕುಮಾರ್ ಎಸ್
- ವರ್ಷ ಜೆ ಎ
- ಹನುಮೇಶ್
- ಜಾಹ್ನವಿ ಡಿ ಎಸ್
- ದಯಾನಂದ ಸ್ವಾಮಿ ಎನ್
- ಆಕಾಶ್ ಆರ್ ಜೆ
- ಹರಿ ಎಲ್