ಯುವ ಸಬಲೀಕರಣ: ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಕೇಳಚಂದ್ರ ಪ್ರತಿಷ್ಠಾನವು ಸರ್ವಜ್ಞನಗರದ ಶಾಸಕರೂ ಆದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಬಲದೊಂದಿಗೆ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಉಚಿತ ಕೌಶಲ್ಯ ತರಬೇತಿಗಾಗಿ 15 ನೇ ಬ್ಯಾಚ್‌ಗೆ ಅರ್ಜಿ ಆಹ್ವಾನಿಸಿದೆ.

ಸರ್ವಜ್ಞನಗರ ಕ್ಷೇತ್ರದ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ ಸ್ವಾವಲಂಬನೆಯ ಜೀವನ ಕಟ್ಟಿಕೊಡುವ ಗುರಿಯೊಂದಿಗೆ 2026ರ ಜನವರಿ 6 ರಂದು ಜೀವನಹಳ್ಳಿ ಕೇಂದ್ರ ಶಾಖೆಯಲ್ಲಿ ಹೊಸ ಬ್ಯಾಚ್ ಪ್ರಾರಂಭವಾಗಲಿದೆ.

ಈ ಕಾರ್ಯಕ್ರಮದಲ್ಲಿ ಎಲೆಕ್ಟ್ರಿಕಲ್ ಮತ್ತು ಮೊಬೈಲ್ ರಿಪೇರಿ, ಸರ್ವೀಸಿಂಗ್ ಮತ್ತು ಡೇಟಾ ಎಂಟ್ರಿ ಆಪರೇಟಿಂಗ್ – ಈ 3 ಕ್ಷೇತ್ರಗಳಲ್ಲಿ ಔದ್ಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ಈಗಿನ ಮಾರುಕಟ್ಟೆ ಅಗತ್ಯಗಳಿಗೆ ಅನುಗುಣವಾಗಿ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸಲು ಈ ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸಲಾಗಿದೆ.

*ಅರ್ಹತಾ ಮಾನದಂಡ*:
ಕನಿಷ್ಠ 9 ನೇ ತರಗತಿಯ ಅರ್ಹತೆ, ಅರ್ಜಿದಾರರು 17 ರಿಂದ 32 ವರ್ಷ ವಯಸ್ಸಿನೊಳಗಿರಬೇಕು.

*ಸ್ಥಳ*: ಬೆಂಗಳೂರಿನ ಕಾಕ್ಸ್ ಟೌನ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ತರಬೇತಿ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳನ್ನು ಪಡೆಯಲು ಮತ್ತು ಲತಾ ಗಣೇಶ್ (98451 48710) ಅವರನ್ನು ಸಂಪರ್ಕಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.

ಕೇಳಚಂದ್ರ ಪ್ರತಿಷ್ಠಾನದಡಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಅಲ್ಲದೇ, ಆರೋಗ್ಯ, ಶಿಕ್ಷಣ ಮತ್ತು ನಾಗರಿಕ ಮೂಲಸೌಕರ್ಯ ಸೇರಿದಂತೆ ಸುಮಾರು ಒಂದು ದಶಕದಿಂದ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ.

ಕೇಳಚಂದ್ರ ಫೌಂಡೇಶನ್ ಮೂಲಕ ಕೆ.ಜೆ. ಜಾರ್ಜ್ ಅವರು ಸರ್ವಜ್ಞನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಅಗತ್ಯ ಅನುಕೂಲಗಳನ್ನು ಕಲ್ಪಿಸುತ್ತಿದ್ದಾರೆ.

2014 ರಲ್ಲಿ ಸ್ಥಾಪನೆಯಾದ ಸರ್ವಜ್ಞ ಆರೋಗ್ಯ ರಕ್ಷಣಾ ಸಂಸ್ಥೆ (SHCI) ಪ್ರತಿಷ್ಠಾನದ ಪ್ರಮುಖ ಸಂಸ್ಥೆಯಾಗಿದೆ. 2014ರ ಏಪ್ರಿಲ್ ಮತ್ತು 2025 ರ ಮಾರ್ಚ್ ಅವಧಿಯಲ್ಲಿ SHCI 34,367 ಉಚಿತ ಡಯಾಲಿಸಿಸ್ ಗೆ ನೆರವಾಗಿದೆ.

ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯ ಸಹಯೋಗದೊಂದಿಗೆ ಈ ಪ್ರಾಥಮಿಕ ಆರೋಗ್ಯ ಕೇಂದ್ರವು 1.07 ಲಕ್ಷಕ್ಕೂ ಹೆಚ್ಚು ಸಮಾಲೋಚನೆಗಳನ್ನು ನಡೆಸಿದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆ ಇರುವವರಿಗೂ ಚಿಕಿತ್ಸೆ ನೀಡಲಾಗಿದೆ.

ಆರೋಗ್ಯ ರಕ್ಷಣೆಯ ಹೊರತಾಗಿ ಶಿಕ್ಷಣ ಮತ್ತು ಮಕ್ಕಳ ಅಭಿವೃದ್ಧಿ, ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿಗಳನ್ನು ಮೂಲಸೌಕರ್ಯ ಸುಧಾರಣೆ ಮತ್ತು ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ಸೌಲಭ್ಯಗಳು, ರಸ್ತೆಗಳು ಮತ್ತು ಒಳಚರಂಡಿ ವ್ಯವಸ್ಥೆಗಳು ಸೇರಿದಂತೆ ನಾಗರಿಕ ಮೂಲಸೌಕರ್ಯ ಕಲ್ಪಿಸುವಲ್ಲಿ ಪ್ರತಿಷ್ಠಾನದ ಪಾತ್ರ ಮಹತ್ವದ್ದು.

“ಕೌಶಲ್ಯ ಅಭಿವೃದ್ಧಿಯು ಸುಸ್ಥಿರ ಜೀವನೋಪಾಯಕ್ಕೆ ದಾರಿಯಾಗಿದೆ. ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದ ಮೂಲಕ, ಸರ್ವಜ್ಞನಗರದ ಯುವಜನರಿಗೆ ಉದ್ಯೋಗ ಮತ್ತು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ನೆರವು ಒದಗಿಸಲಾಗುವುದು. ಉದ್ಯೋಗಕ್ಕೆ ಪೂರಕವಾದ ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಯುವಜನರನ್ನು ಸಜ್ಜುಗೊಳಿಸುವುದು ನಮ್ಮ ಗುರಿಯಾಗಿದೆ. ತರಬೇತಿ ಪಡೆದ ಪ್ರತಿಯೊಬ್ಬರು ಕೇವಲ ಒಂದು ಕುಟುಂಬ ಮಾತ್ರವಲ್ಲ, ಇಡೀ ಸಮುದಾಯಕ್ಕೆ ಬಲ ತುಂಬುತ್ತಾರೆ. ಕೇಳಚಂದ್ರ ಫೌಂಡೇಶನ್ ತಳಮಟ್ಟದಿಂದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಜನರ ಆರೋಗ್ಯ ರಕ್ಷಣೆ, ಜೀವನೋಪಾಯಕ್ಕೆ ಅಗತ್ಯ ನೆರವು ಒದಗಿಸಲು ಬದ್ಧ” ಎಂದು ಇಂಧನ ಸಚಿವರ ಕೆ.ಜೆ. ಜಾರ್ಜ್ ಹೇಳಿದರು.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

6 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

7 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

7 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

16 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

17 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

20 hours ago