ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2022 ನೇ ಸಾಲಿನ ಏಕಲವ್ಯ ಪ್ರಶಸ್ತಿಗಳಿಗಾಗಿ ಅರ್ಹ ಕ್ರೀಡಾಪಟುಗಳಿಂದ 2023 ರ ನವೆಂಬರ್ 28ರ ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ,ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಸಂಬಂಧಿಸಿದಂತೆ ಜಿಲ್ಲೆಗಳಲ್ಲಿ ಅರ್ಹ ಕ್ರೀಡಾ ಪೋಷಕರಿಂದ / ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು  ಅರ್ಜಿಗಳನ್ನು 2023 ನವೆಂಬರ್ 28 ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ,ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.

ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ  ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

2022ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ ತರಬೇತುದಾರರುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್‌ಲೈನ್ (ವೆಬ್‌ಸೈಟ್: https://sevasindhu.karnataka.gov.in) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಗಳನ್ನು 2023 ರ ನವೆಂಬರ್ 28 ರೊಳಗೆ ಸಲ್ಲಿಸಬೇಕು.

ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಜಿಲ್ಲಾ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲು ಅರ್ಜಿ ಆಹ್ವಾನ

2021 ಮತ್ತು 2022 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತ ತಂಡವನ್ನು ಪುತಿನಿಧಿಸಿ ಭಾಗವಹಿಸಿದಲ್ಲಿ/ಪದಕ ವಿಜೇತರಾದಲ್ಲಿ ರೂ.50,000/- ಗಳ ನಗದು ಪುರಸ್ಕಾರ ನೀಡುವುದು, ಒಲಂಪಿಕ್ಸ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಕ್ರೀಡಾಕೂಟಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಕ್ರೀಡಾಕೂಟಗಳಲ್ಲಿ ಪದಕ ಪಡೆಯುವ ಕ್ರೀಡಾಪಟುಗಳಿಗೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ಅಥವಾ ವಾರ್ಷಿಕ ಅತ್ಯುತ್ತಮ ಎರಡು ಸಾಧನೆಗಳನ್ನು ಪರಿಗಣಿಸಿ ಯಾವುದು ಕಡಿಮೆಯೊ ಆ ಮೊತ್ತಕ್ಕೆ ನಗದು ಬಹುಮಾನವನ್ನು ನೀಡಲಾಗುವುದು.

ಕರ್ನಾಟಕವನ್ನು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ಹಾಗೂ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು 2023 ರ ನವೆಂಬರ್ 28 ರ ಒಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ,ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬೇಕು.ಅಂತಿಮ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080-29787442, ಮೊಬೈಲ್ ಸಂಖ್ಯೆ 9632778567 ಮೂಲಕ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *