ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ವಿವಿಧ ತರಬೇತಿಗಳಿಗೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಮ್/ ಫಿಟ್ನೆಸ್  ತರಬೇತಿ ಶಿಬಿರವು ಜನವರಿ 24 ರಿಂದ  ಫೆಬ್ರವರಿ 07 ರ ವರೆಗೆ (15 ದಿನಗಳು) ನಡೆಯಲಿದ್ದು,  ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 16 ರಿಂದ 30 ವರ್ಷ ವಯೋಮಿತಿ ಹೊಂದಿರಬೇಕು. ತರಬೇತಿಯು ಶ್ರಿ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ವಿದ್ಯಾನಗರ / ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಯಲಿದೆ.

ಬ್ಯೂಟೀಷಿಯನ್ ತರಬೇತಿ ಶಿಬಿರವು ಜನವರಿ 26 ರಿಂದ ಫೆಬ್ರವರಿ 07 ರ ವರೆಗೆ (13 ದಿನಗಳು) ನಡೆಯಲಿದೆ. ಎಸ್.ಎಸ್.ಎಲ್.ಸಿ (ಪಾಸ್/ಫೇಲ್, 15 ರಿಂದ 29 ವರ್ಷ ವಯೋಮಿತಿ ಹೊಂದಿರಬೇಕು. ವಿಡಿಯೋಗ್ರಫಿ ತರಬೇತಿ ಶಿಬಿರ ಜನವರಿ 27 ರಿಂದ ಫೆಬ್ರವರಿ 07 ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ವಿದ್ಯಾರ್ಹತೆ, 15 ರಿಂದ 29 ವರ್ಷ ವಯಸ್ಸಿರಬೇಕು. ಬ್ಯೂಟಿಷಿಯನ್ ಹಾಗೂ ವಿಡಿಯೋಗ್ರಫಿ ತರಬೇತಿಯು ಕುಂಬಳಗೋಡು ತರಬೇತಿ ಕೇಂದ್ರ, ಬೆಂಗಳೂರಿನಲ್ಲಿ ನಡೆಯಲಿದೆ.

ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಶಿಬಿರವು (08 ದಿನಗಳು) ಜನವರಿ 31 ರಿಂದ  ಫೆಬ್ರವರಿ 07 ರ ವೆರೆಗೆ ನಡೆಯಲಿದ್ದು, ಪದವಿ ಹಾಗೂ ಪತ್ರಿಕೋಧ್ಯಮ ವಿದ್ಯಾರ್ಹತೆಗೆ (Journalism) ಗೆ ಪ್ರಾಮುಖ್ಯತೆ ನೀಡಲಾಗುವುದು, 15 ರಿಂದ 29 ವರ್ಷ ವಯಸ್ಸಿರಬೇಕು. ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ತರಬೇತಿ ನಡೆಯಲಿದೆ.

ಯುವಜನರನ್ನು ಸ್ವಾವಲಂಭಿಯಾಗಲು ಉತ್ತೇಜಿಸುವ ದೃಷ್ಟಿಯಿಂದ ಮುಂದುವರೆದು ಮೊದಲನೇ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಸೀಮಿತಗೊಳಿಸಬೇಕಾಗಿರುವುದರಿಂದ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಭಾಗವಹಿಸುವ ಯುವಜನರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುವುದು. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು (ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ  ಪತ್ರವನ್ನು ಕಡ್ಡಾಯವಾಗಿ ಲಗತ್ತಿಸುವುದು.) ಅರ್ಜಿದಾರರು 15-29 ವರ್ಷದ ವಯಸ್ಸಿನವರಾಗಿರಬೇಕು.

ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್ ನಕಲು ಪ್ರತಿಯನ್ನು ಲಗತ್ತಿಸುವುದು.

ಬ್ಯೂಟೀಷಿಯನ್ ತರಬೇತಿ ಪಡೆಯಲು ಕನಿಷ್ಠ 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು. ನಿರೂಪಣಾ ಮತ್ತು ವಾರ್ತಾ ವಾಚಕರ ತರಬೇತಿ ಪಡೆಯಲು ಪದವಿ ಅಂಕಪಟ್ಟಿಯನ್ನು ಲಗತ್ತಿಸುವುದು ಹಾಗೂ ಪತ್ರಿಕೋದ್ಯಮಕ್ಕೆ ಪ್ರಾಮುಖ್ಯತೆ.

ವೀಡಿಯೋಗ್ರಫಿ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು, ಅಂಕಪಟ್ಟಿಯನ್ನು ಲಗತ್ತಿಸುವುದು. ಜಿಮ್/ಫಿಟ್ನೆಸ್ ತರಬೇತಿ ಪಡೆಯಲು ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡಿದ್ದು ಅಂಕಪಟ್ಟಿಯನ್ನು ಲಗತ್ತಿಸುವುದು.

ಅರ್ಜಿಗಳನ್ನು ಜನವರಿ 18 ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯ ಸಹಾಯಕರು / ಕಚೇರಿ ದೂರವಾಣಿ ಸಂಖ್ಯೆ 9632778567 ಮತ್ತು 080-29787442 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

4 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

5 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

18 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

19 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

20 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

1 day ago