ಯುವ ಸಮುದಾಯದಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಸಾಹಿತಿ ಮಣ್ಣೆ ಮೋಹನ್ ತಿಳಿಸಿದರು.
ನಗರದ ಕನ್ನಡ ಜಾಗೃತ ಭವನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಸಾಹಿತಿ ಕೆ.ಮಹಾಲಿಂಗಯ್ಯ ಅವರ ಕವನ ಸಂಕಲನ ಜೀವಗಂಗೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸೃಜನಶೀಲ ಸಾಹಿತಿಗಳು ಸಾಹಿತ್ಯ ಮತ್ತು ಸಂಸ್ಕೃತಿಯ ಚಿಂತನೆಗಳೊಂದಿಗೆ ಬದುಕಿನ ಅನುಭವಗಳನ್ನು ದಾಖಲಿಸಬೇಕು. ಶರಣರು ಅನುಭಾವ ಮಂಟಪದಲ್ಲಿ ತಮ್ಮ ಬದುಕಿನ ಅನುಭವಗಳನ್ನು ದಾಖಲಿಸುತ್ತಿದ್ದರು. ಪರಸ್ಪರ ಚರ್ಚೆ, ಸಂವಾದಗಳು ಜ್ಞಾನದ ಅರಿವನ್ನು ವಿಸ್ತರಿಸುತ್ತವೆ. ಮೊಬೈಲ್, ಟಿವಿಯ ಆಕರ್ಷಣೆಯಿಂದ ಜನರು ವಿಚಾರ ವಿನಿಮಯಗಳಿಂದ ದೂರವಾಗುತ್ತಿದ್ದಾರೆ. ಅದೇ ರೀತಿ ಓದಿನ ಹವ್ಯಾಸದಿಂದ ಸಹ ವಿಮುಖವಾಗಿದ್ದಾರೆ. ಪುಸ್ತಕ ಪ್ರೀತಿಯನ್ನು ಬೆಳೆಸುವ ಕೆಲಸ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರತಿ ಮನೆಯಲ್ಲೂ ನೂರು ಪುಸ್ತಕಗಳಿರುವ ಗ್ರಂಥಾಲಯ ಹೊಂದಿರಬೇಕು ಎಂದರು.
ಜ್ಞಾನಗಂಗೆ ಕವನ ಸಂಕಲನದಲ್ಲಿ ಸಾಹಿತ್ಯ ಮತ್ತು ಶಿಕ್ಷಣದ ಅರಿವಿದೆ. ಸಾಹಿತ್ಯದ ಎಲ್ಲಾ ಆಯಾಮಗಳನ್ನು ಒಳಗೊಳ್ಳುವ ವಿಷಯಗಳು ಕವಿತೆಗಳಾಗಿವೆ. ಭಾರತೀಯ ಪರಂಪರೆ, ಶೈಕ್ಷಣಿಕ ವಿಚಾರಧಾರೆಗಳು, ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದನೆಯುಳ್ಳ ಸಾಹಿತ್ಯ ಕೃತಿಗಳು ಸಹೃದಯರ ಮನಸ್ಸನ್ನು ಗೆಲ್ಲುತ್ತವೆ. ಸರಳ ಶೈಲಿ, ಲಯಗಳೊಂದಿಗೆ ಸಮಾಜಮುಖಿ ಚಿಂತನೆಗಳೊಂದಿಗೆ ಜ್ಣಾನಗಂಗೆ ಕವನ ಸಂಕಲನ ಓದುಗರ ಮೆಚ್ಚುಗೆಗೆ ಪಾತ್ರವಾಗುತ್ತದೆ ಎಂದರು.
ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡ ಪುಸ್ತಕಗಳ ಓದು ನಮ್ಮ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿಯ ಅರಿಯಲು ಸಹಕಾರಿ ಆಗುತ್ತವೆ. ಕಿರಿಯರಿಂದ ಹಿರಿಯರ ತನಕ ಇಂದು ಮೊಬೈಲ್ ಗೀಳಿಗೆ ಒಳಗಾಗಿದ್ದಾರೆ. ಮೊಬೈಲ್ ಗೀಳು ಮನುಷ್ಯನ ಸೃಜನಶೀಲ ಚಿಂತನೆ ಮತ್ತು ಚಟುವಟಿಕೆಗಳನ್ನು ಹಾಳು ಮಾಡುತ್ತಿದೆ. ಜನರಲ್ಲಿ ಪುಸ್ತಕ ಪ್ರೀತಿ ಬೆಳೆಸುವ ಕೆಲಸವನ್ನು ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ ಸಂಸ್ಥೆಗಳು ಮಾಡಬೇಕಾಗಿವೆ. ವಿದ್ಯಾರ್ಥಿಗಳು ಸಹ ಪಠ್ಯಗಳ ಓದಿಗಷ್ಟೇ ಸೀಮಿತಗೊಂಡಿದ್ದಾರೆ. ಪುಸ್ತಕಗಳಿಂದ ವಿಮುಖವಾಗಿರುವ ಜನರಲ್ಲಿ ಪುಸ್ತಕಗಳ ಓದಿದ ಹವ್ಯಾಸವನ್ನು ಬೆಳೆಸಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಸಂಘ ಸಂಸ್ಥೆಗಳು ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.
ಸಮಾರಂಭದಲ್ಲಿ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ, ಸಾಹಿತಿ ಕೆ.ಮಹಾಲಿಂಗಯ್ಯ, ಕನ್ನಡ ಪಕ್ಷದ ಹಿರಿಯ ಮುಖಂಡ ಸಂಜೀವನಾಯಕ್,
ನಿವೃತ್ತ ಪ್ರಾಂಶುಪಾಲರುಗಳಾದ. ಎಂ.ವಿ.ನೆಗಳೂರು, ಜಿ.ರಾಮಚಂದ್ರ, ಹೊಂಗಿರಣ ಸಂಸ್ಥೆಯ ಟಿ.ಸಿ.ವೆಂಕಟಾಚಲಪತಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮುನಿರಾಜು, ಮುಖ್ಯಶಿಕ್ಷಕ ಚೌದರಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಪದಾಧಿಕಾರಿಗಳಾದ ಚೆನ್ನಕೇಶವಮೂರ್ತಿ, ಮುನಿರಾಜು, ಮುದ್ದುಗಂಗಯ್ಯ, ಮೊದಲಾದವರು ಭಾಗವಹಿಸಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…