ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ. ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆಗೆ ಹಲವು ಬಾರಿ ತಿಳಿಸಿದರೂ ಏನೂ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯ‌ ನಿವಾಸಿ ವಸಂತ್ ಕುಮಾರ್ ಅವರು ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, 2020ರಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ದೂರಿದರು.

ತಾತ್ಕಾಲಿಕವಾಗಿ ಎಸ್ ಟಿ ಪಿ ಘಟಕವನ್ನು ಸರಿಪಡಿಸುವ ಮೂಲಕ ಜಾರಿಕೊಳ್ಳುವ ಅಧಿಕಾರಿಗಳು, ನಮಗೆ ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ನಮಗೆ ಕೊಳಚೆ ನೀರಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಬೇಕಿದೆ ಎಂದು ಆಗ್ರಹಿಸಿದರು.

ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.

ನಂತರ ಸೌಮ್ಯ ಮಾತನಾಡಿ, ಯುಜಿಡಿ ನೀರಿನ ಕೆಟ್ಟವಾಸನೆಯಿಂದಾಗಿ ಮನೆಯಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮಸ್ಯೆ ಅಧಿಕಾರಿಗಳ ಕಣ್ಣಿಗೆ ಕಾಣುತಿಲ್ಲ. ಮತ ಕೇಳಲು ಬರುವ ಜನಪ್ರತಿನಿಧಿಗಳು ಮೌನವಹಿಸಿರುವುದು ಸರಿಯಲ್ಲ. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂಬುದೇ ನಮ್ಮೆಲ್ಲರ ಒತ್ತಾಯ ಎಂದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ, ಚಂದ್ರಮೌಳೇಶ್ವರ ಲೇಔಟನ್ನು 2005 ರಲ್ಲಿ ಮಾಡಲಾಗಿದ್ದು,  ಲೇಔಟ್ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು, ಲೇಔಟ್ ತಗ್ಗು ಪ್ರದೇಶದಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಲಾಗಿದೆ. ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಚೇಂಬರ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಬಡಾವಣೆ ನಿವಾಸಿಗಳಾದ ರವಿಕುಮಾರ್, ವಸಂತ್, ನಾಗೇಶ್, ಸೌಮ್ಯ, ರವಿ, ಮಂಜುಳಾ, ಪ್ರಿಯಾಂಕಾ, ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

48 minutes ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

1 hour ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

5 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

7 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

10 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

14 hours ago