ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಇಂದು ಆಯ್ಕೆಯಾಗಿದ್ದಾರೆ.
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಿಂದ ಸಭಾಧ್ಯಕ್ಷರಾದ ಎರಡನೇ ಜನಪ್ರತಿನಿಧಿ ಖಾದರ್ ಆಗಿದ್ದಾರೆ. ಇದರಂತೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಿಂದ ಈ ಹುದ್ದೆಗೆ ಏರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿಪಕ್ಷ ನಾಯಕರು ನೂತನ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.