ಯು.ಪಿ.ಎಸ್.ಸಿ ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು ರಾಜ್ಯದ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ), 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ ಅನ್ನು ನೋಡಬಹುದು. ಹಾಗೂ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

5 minutes ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

13 minutes ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

23 minutes ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

2 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

3 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

18 hours ago