ಯೋಗಾಸನದಲ್ಲಿ ಲಿಟ್ಲ್ ಮಾಸ್ಟರ್ ಶಾಲೆಯ 21 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ: ಶಾಲಾ ಆಡಳಿತ ಮಂಡಳಿ ಅಭಿನಂದನೆ

ಯೋಗಾಸನ ಸ್ಪರ್ಧೆಯಲ್ಲಿ ಕಂಟನಕುಂಟೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ 21 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಯ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಆಗಸ್ಟ್ 6 ರಂದು ರಾಷ್ಟ್ರೀಯ ಪ್ರಕೃತಿ ಯೋಗ ಅಕಾಡೆಮಿಯಿಂದ ಯಲಹಂಕದಲ್ಲಿರುವ ನಾಗಾರ್ಜುನ ಕಾಲೇಜಿನಲ್ಲಿ ಯೋಗಾಸನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಕಂಟನಕುಂಟೆ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ 21 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಕೆ.ಜಿ ಶ್ರೀನಿವಾಸ್ ಮಾತನಾಡಿ, ಮಕ್ಕಳು ಮಾನಸಿಕ ಒತ್ತಡ, ಏಕಾಗ್ರತೆ, ಚಟುವಟಿಕೆಗಳಲ್ಲಿ ಮಾನಸಿಕವಾಗಿ ಸದೃಡವಾಗಲು, ಲವಲವಿಕೆಯಿಂದ ಕ್ರಿಯಾಶೀಲರಾಗಲು ಯೋಗಾಸನ ಒಂದೆ ಸುಲಭವಾದ ಮಾರ್ಗ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದೇ ಸಂಧರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಉಷಾ ಶ್ರೀನಿವಾಸ್, ಮುಖ್ಯೋಪಾಧ್ಯಾಯರಾದ ಶೋಭ ಯೋಗ ಶಿಕ್ಷಕರಾದ ರೂಪದೇವಿಯವರಿಗೆ ಯೋಗ ಕಲಾಶ್ರಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ರಾಷ್ಟ್ರ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಕೀರ್ತಿ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

3 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

12 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

18 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago