ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ ಎನ್. ಚಲುವರಾಯಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದ 136 ಕಾಂಗ್ರೆಸ್ ಶಾಸಕರಿಗೆ ಪರಿಹಾರ ನೀಡುವ ಯೋಗ್ಯತೆ ಇಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಯನ್ನು ಖಂಡಿಸಿರುವ ಅವರು, ಬೇರೆಯವರ ಬಗ್ಗೆ ಮಾತನಾಡುವ ಮುನ್ನ ತಮ್ಮ ಯೋಗ್ಯತೆಯನ್ನು ನೋಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
“ರಾಜ್ಯ ಸರ್ಕಾರವು ಕೇವಲ ಒಂದು ರಾಜ್ಯದ ಆಡಳಿತ ನಡೆಸುತ್ತಿದೆ. ಆದರೆ ಕುಮಾರಸ್ವಾಮಿಯವರು ಇದೀಗ ಇಡೀ ದೇಶದ ಆಡಳಿತದ ಭಾಗವಾಗಿದ್ದಾರೆ. ಕೇಂದ್ರದಲ್ಲಿ ದೊಡ್ಡ ಖಾತೆಯನ್ನು ಹೊಂದಿದ್ದರೂ, ಅವರು ವಾಸ್ತವದಲ್ಲಿ ಕೆಲಸ ಮಾಡುವುದಕ್ಕಿಂತ ಹೆಚ್ಚಾಗಿ ಕೇವಲ ಪ್ರಚಾರದ ಭಾಷಣಗಳಿಗೆ ಸೀಮಿತವಾಗಿದ್ದಾರೆ” ಎಂದು ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ.
ತಮಗೆ ಯೋಗ್ಯತೆ ಇದೆ ಎಂದಾದರೆ, ಮೊದಲು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲಿನ ಹಣವನ್ನು ತಂದುಕೊಡಲಿ ಎಂದು ಅವರು ಸವಾಲು ಹಾಕಿದ್ದಾರೆ. ಕೇಂದ್ರದ ಪರಿಹಾರದ ಮೊತ್ತ ಬಂದ ಬಳಿಕ ರೈತರಿಗೆ ಎಷ್ಟು ಪರಿಹಾರ ನೀಡಬೇಕು ಎಂಬುದು ರಾಜ್ಯ ಸರ್ಕಾರಕ್ಕೆ ತಿಳಿದಿದೆ. ಪ್ರಸ್ತುತ ರಾಜ್ಯದ ಸ್ವಂತ ಖಜಾನೆಯಿಂದಲೇ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆಯೂ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ವರ್ಷ ಎಸ್‌ಡಿಆರ್‌ಎಫ್ (SDRF) ಅಡಿಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ 1,230 ಕೋಟಿ ರೂ. ಬಿಡುಗಡೆ ಮಾಡಬೇಕಿತ್ತು. ಇದರಲ್ಲಿ ಶೇ. 20ರಷ್ಟು ಹಣ ರಾಜ್ಯದ್ದೇ ಆಗಿದೆ. ಆದರೆ, ಕೇಂದ್ರವು ಬಿಡುಗಡೆ ಮಾಡಿರುವುದು ಕೇವಲ 430 ಕೋಟಿ ರೂ. ಮಾತ್ರ. ಕಳೆದ ಬಾರಿ ಅತಿವೃಷ್ಟಿಯಾದಾಗಲೂ ರಾಜ್ಯಕ್ಕೆ ಕೇವಲ 6,800 ಕೋಟಿ ರೂ. ನೀಡಿದ್ದ ಕೇಂದ್ರ ಸರ್ಕಾರ, ಮಧ್ಯಪ್ರದೇಶಕ್ಕೆ 40,000 ಕೋಟಿ ರೂ. ಹಾಗೂ ಉತ್ತರ ಪ್ರದೇಶಕ್ಕೆ 32,000 ಕೋಟಿ ರೂ. ನೀಡಿ ತಾರತಮ್ಯ ಮೆರೆದಿದೆ” ಎಂದು ಆರೋಪಿಸಿದ್ದಾರೆ.
“ಎಸ್‌ಡಿಆರ್‌ಎಫ್ ಹಣ ನಮ್ಮ ಹಕ್ಕು, ಇದು ನಮ್ಮ ತೆರಿಗೆಯಿಂದ ಕೂಡಿದ ಸಾಂವಿಧಾನಿಕ ಮೊತ್ತ. ಆದರೆ ಕೇಂದ್ರ ಸರ್ಕಾರವು ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಮಾತ್ರ ಹೆಚ್ಚಿನ ಅನುದಾನ ನೀಡಿ, ನಮ್ಮ ರಾಜ್ಯಕ್ಕೆ ಕೇವಲ ಬಿಡಿಗಾಸು ನೀಡುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಇಂತಹ ಬರೀ ಭಾಷಣಗಳನ್ನು ಕೇಳಿ ಬೇಸತ್ತಿರುವ ಕಾರಣಕ್ಕಾಗಿಯೇ ರಾಜ್ಯದ ಜನತೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 136 ಶಾಸಕರನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ” ಎಂದು ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…