ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಆರೋಪಿ ಸತೀಶ್ ರೆಡ್ಡಿ ಯೋಗ ಶಿಕ್ಷಕಿಯ ಬಳಿ ಯೋಗ ಕಲಿಯುವುದಕ್ಕೆ ಹೊಗುತ್ತಿದ್ದ. ನಂತರ ಗನ್ ತರಬೇತಿ ಕೊಡುವುದಾಗಿ ಆಕೆಯ ಮನೆಗೆ ಬಂದಿದ್ದ. ಈ ವೇಳೆ ಆರೋಪಿಗಳ ಗ್ಯಾಂಗ್ ಶಿಕ್ಷಕಿಯನ್ನು ಅಪಹರಿಸಿತ್ತು.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಯಾದ ಶಿಕ್ಷಕಿಯನ್ನು ಅ.23 ರಂದು ಆರೋಪಿಗಳ ಗ್ಯಾಂಗ್ ಅಪಹರಿಸಿತ್ತು. ಬಳಿಕ ಶಿಡ್ಲಘಟ್ಟ ತಾಲ್ಲೂಕಿನ ಧನಮಿಟ್ಟೇನಹಳ್ಳಿ ಬಳಿ ಜೀವಂತವಾಗಿ ಹೂತು ಹಾಕಲಾಗಿತ್ತು. ಸತ್ತಂತೆ ನಟಿಸಿದ್ದ ಶಿಕ್ಷಕಿ ಬಳಿಕ ಸ್ಥಳೀಯರ ಬಳಿ ಬಟ್ಟೆ ಪಡೆದುಕೊಂಡು ಬಂದು ದಿಬ್ಬೂರಹಳ್ಳಿ ಠಾಣೆಗೆ ಆಗಮಿಸಿದ್ದಾರೆ. ಕೊಲೆಗೆ ಯತ್ನ, ಅಪಹರಣ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ದೂರು ನೀಡಿದ್ದಾರೆ.
ಮಹಿಳೆ ದೂರು ಆಧರಿಸಿ ಆರೋಪಿಗಳ ಪತ್ತೆಗೆ ಎಸ್ಪಿ ಕುಶಾಲ್ ಚೌಕ್ಸೆ ಆದೇಶದಂತೆ ಸರ್ಕಲ್ ಇನ್ಸ್ಪೆಕ್ಟರ್ ಎಂ ಶ್ರೀನಿವಾಸ್ ಸಹಕಾರದೊಂದಿಗೆ ಪಿಎಸ್ ಐ ಶ್ಯಾಮಲ ಹಾಗೂ ವಿಶೇಷ ತನಿಖಾ ತಂಡ ರಚಿಸಿ ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…